ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡಿ.3ರಂದು ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಡು ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅದ್ಧೂರಿ ಚಾಲನೆ
ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.