ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, “ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ವಸತಿನಿಲಯಗಳ ಕೊರತೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ವಿಶ್ವವಿದ್ಯಾಲಯ ಎಡವಿದೆ” ಎಂದು ಆರೋಪಿಸಿದರು.
“ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ಮಂಜೂರಿಯಾಗದೆ, ವಸತಿ ನಿಲಯ ಪ್ರವೇಶವೂ ಸಿಗದೆ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ. ಬುಕ್ ಬ್ಯಾಂಕ್ ಸ್ಥಾಪಿಸದಿರುವುದರಿಂದ ನೂತನ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ಪದವಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಕೂಡಲೇ ಸಮಸ್ಯೆ ಬಗೆಹರಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಬೇಕು” ಎಂದು ಪಟ್ಟು ಹಿಡಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಹಾರಕ್ಕೆ ವಿಷ ಹಾಕಿ 20ಕ್ಕೂ ಹೆಚ್ಚು ನಾಯಿಗಳ ಹತ್ಯೆ
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಪೂಜಾರಿ, ವಿಶ್ವವಿದ್ಯಾಲಯದ ಕುಲಸಚಿವ ಸಂಕರಗೌಡ ಸೊಮನಾಳ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಪ್ರೊ. ಮಲ್ಲಿಕಾರ್ಜುನ, ಡಾ. ಶಾಂತಾದೇವಿ, ಡಾ. ರಾಜ್‌ಕುಮಾರ್ ಮಾಲಿಪಾಟಿಲ, ಡಾ. ಜ್ಯೊತಿ ಉಪಾಧ್ಯಾಯ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಮುಖಂಡರುಗಳಾದ ಅಕ್ಷಯ್ ಕುಮಾರ್ ಅಜಮನಿ, ದರ್ಶನ್ ಸಾಲೊಟಗಿ, ಪ್ರೀತಿ ಗುಡಿಮನಿ, ಆಶಾ ಪವಾರ್, ಲತಾ ರಾಠೋಡ್ ಸೇರಿದಂತೆ ಇತರರು ಇದ್ದರು.