ರಾಜಸ್ಥಾನ | ಕಾಂಗ್ರೆಸ್, ಬಿಜೆಪಿ ತೀವ್ರ ಪೈಪೋಟಿ

Date:

ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭದ ಮತ ಎಣಿಕೆ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ನೇರಾ ನೇರ ಪೈಪೋಟಿ ನೀಡುತ್ತಿದೆ. ಕಾಂಗ್ರೆಸ್ 80 ಮತ್ತು ಬಿಜೆಪಿ 95 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಮತಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮತಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಡಿಸಿಎಂ ಸಚಿನ್ ಪೈಲಟ್ ಮತ್ತು ಮಾಜಿ ಸಿಎಂ ವಸುಂಧರಾ ರಾಜೇ ಅವರ ಭವಿಷ್ಯ ಸಂಜೆಯೊಳಗೆ ನಿರ್ಧಾರವಾಗಲಿದೆ.

2018ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದು ವಸುಂಧರಾ ರಾಜೇ ಸರ್ಕಾರವನ್ನು ಅಂತ್ಯಗೊಳಿಸಿತು. ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿಯಾದರು ಮತ್ತು ಸಚಿನ್ ಪೈಲಟ್ ಅವರು ಉಪಮುಖ್ಯಮಂತ್ರಿಯಾದರು.

ಇಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿರುವ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಶಾಸಕಾಂಗ ಪಕ್ಷದ ಸಭೆಗಳನ್ನು ಸಂಘಟಿಸಲು ವೀಕ್ಷಕರನ್ನು ನೇಮಿಸಿದೆ.

ರಾಜಸ್ಥಾನದಲ್ಲಿ ಪಕ್ಷವು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಧುಸೂದನ್ ಮಿಸ್ತ್ರಿ, ಮುಕುಲ್ ವಾಸ್ನಿಕ್ ಮತ್ತು ಶಕೀಲ್ ಅಹ್ಮದ್ ಖಾನ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನೇಮಿಸಿದೆ

 

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ...