ವಿಜಯಪುರ | ಪಂಚ ನದಿಗಳ ಜಿಲ್ಲೆಯಲ್ಲಿ ಬರದ ಕಾವು: ಡೋಣಿ ಹೂಳು ತೆರವಿಗೆ ರೈತ ಸಂಘ ಒತ್ತಾಯ

Date:

ವಿಜಯಪುರ ಜಿಲ್ಲೆ ಪಂಚ ನದಿಗಳ ಜಿಲ್ಲೆ ಎಂದು ಖ್ಯಾತಿಯಾಗಿದೆ. ಆದರೆ ಪ್ರತಿ ಎರಡು ವರ್ಷ ಮೂರು ವರ್ಷಕ್ಕೊಮ್ಮೆ ಒಣಬರ, ಹಸಿಬರ ತಪ್ಪಿದ್ದಲ್ಲ. ಇದರಿಂದ ಈ ಭಾಗದ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಒತ್ತಾಯಿಸಿದರು.

- Advertisement -

“ಅದರಲ್ಲೂ ಪ್ರಮುಖವಾಗಿ ಮಹಾರಾಷ್ಟ್ರದಿಂದ ಕರ್ನಾಟಕದ ಮಾರ್ಗವಾಗಿ ಆಂಧ್ರಕ್ಕೆ ಸೇರುವಂತಹ ಡೋಣಿ ನದಿಯು ಸುಮಾರು 215 km ಉದ್ದ ಇದ್ದು, ಇದರಲ್ಲಿ ಹೂಳು ತುಂಬಿದೆ. ಮಳೆಗಾಲದಲ್ಲಿ ಡೋಣಿ ತುಂಬಿ ಹರಿಯುವಾಗ ಹೊಳಿನಿಂದ ನೀರು ಅಕ್ಕಪಕ್ಕದ ಜಮೀನುಗಳಿಗೆ ನುಗ್ಗಿ ಸಾಕಷ್ಟು ನಷ್ಟ ಉಂಟುಮಾಡುತ್ತದೆ. ಹಲವಾರು ವರ್ಷಗಳಿಂದ ಈ ಡೋಣಿ ಭಾಗದ ರೈತರು, ರೈತ ಮುಖಂಡರು, ರೈತ ಸಂಘದವರು ಹಾಗೂ ರೈತಪರ ಚಿಂತಕರು ಜಿಲ್ಲಾಧಿಕಾರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಿದರೂ ಕೂಡ ಇದಕ್ಕೆ ಒಂದು ಶಾಶ್ವತ ಪರಿಹಾರ ಸಿಕ್ಕಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಕರ್ನಾಟಕದಲ್ಲಿ ಹಾದು ಹೋಗುವಂತ ಡೋಣಿಯನ್ನು ಸಂಪೂರ್ಣ ಅಳತೆ ಮಾಡಿ ಅಲ್ಲಿರುವಂಥ ಹೂಳು ತೆಗೆದು ಅಕ್ಕಪಕ್ಕದಲ್ಲಿ ಕಲ್ಲಿನ ತಡೆಗೋಡೆ ನಿರ್ಮಿಸಿ, ದೊಡ್ಡ ದೊಡ್ಡ ಮರಗಳನ್ನು ಬೆಳೆಸುವ ಮೂಲಕ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇದಕ್ಕಾಗಿ ವಿಜಯಪುರದ ಜಿಲ್ಲಾಧಿಕಾರಿ ಡಾ. ಕೆ ಆನಂದ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ್ ಅವರು ರಾಜ್ಯ ಸರ್ಕಾರಕ್ಕೆ ಒಂದು ಪ್ರಸ್ತಾವನೆ ಸಲ್ಲಿಸಿ ಅಗತ್ಯ ಅನುದಾನವನ್ನು ಮಂಜೂರು ಮಾಡಿಸಬೇಕು. ಇದರಿಂದ ಡೋಣಿಯ ಅಕ್ಕ ಪಕ್ಕದ ರೈತರಿಗೆ ಅನುಕೂಲವಾಗಲಿದೆ” ಎಂದರು.

ಇದನ್ನೂ ಓದಿ> ಕಮಲನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆರಂಭಕ್ಕೆ ರೈತ ಸಂಘ ಆಗ್ರಹ

“ರೈತರು ನಷ್ಟದಲ್ಲಿದ್ದಾಗ ನೆಪಮಾತ್ರಕ್ಕೆ ಒಂದೆರೆಡು ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿ ಪ್ರತಿ ವರ್ಷ ಅನುದಾನ ಕೊಟ್ಟರೂ ಇದಕ್ಕೆ ಶಾಶ್ವತ ಪರಿಹಾರ ದೊರೆಯುವುದಿಲ್ಲ. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರಕ್ಕಾಗಿ ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ರೈತ ಮುಖಂಡರಾದ ಮಲ್ಲಿಕಾರ್ಜುನ ಭಟಗಿ, ಅಭಿಷೇಕ್ ಹೂಗಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...