2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ. 47,790 ಪ್ರಸ್ತಾವನೆಗಳ ಸುಮಾರು 45,686 ಹೆಕ್ಟೇರ್‌ಗಳಿಗೆ ಬೆಳೆವಿಮೆ ಪಾವತಿಯಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಮೊತ್ತ ಪಾವತಿಯಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು.
ಮರುವಿನ್ಯಾಸಗಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಜಿಲ್ಲೆಗೆ ಅಡಿಕೆ, ಕರಿಮೆಣಸು, ಹಸಿರು ಮೆಣಸಿನಕಾಯಿ, ದಾಳಿಂಬೆ ಮತ್ತು ಮಾವು ಬೆಳೆಗೆ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ವಿವಿಧ ಕಾರಣಗಳಿಂದ ಬೆಳೆನಷ್ಟ ಉಂಟಾಗಿದ್ದು, ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾದ ದತ್ತಾಂಶ ಆಧರಿಸಿ ಬೆಳೆವಿಮೆ ಮೊತ್ತ ರೈತರಿಗೆ ದೊರಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ
2026-27ನೇ ಸಾಲಿನಲ್ಲಿ ಅತೀ ಹೆಚ್ಚು 65,608 ರೈತರು ಬೆಳೆ ವಿಮೆ ನೋಂದಾಯಿಸಿಕೊಂಡಿದ್ದು, ₹24.85 ಕೋಟಿ ಪ್ರೀಮಿಯಂ ಮೊತ್ತ ಪಾವತಿಸಿದ್ದಾರೆ ಎಂದು ಹೆಚ್ಚಿನ ಮಾಹಿತಿ ತಿಳಿಸಿದರು.




