ಸಂಕಷ್ಟದಲ್ಲಿ ಮೆಣಸಿನಕಾಯಿ ಬೆಳೆಗಾರ, ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಮನವಿ

Date:

Advertisements

ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

“ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿದ್ದು, ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದ್ದಾರೆ.

Advertisements

“ಕಳೆದ ವರ್ಷ ಮೆಣಸಿನಕಾಯಿ ಉತ್ಪಾದನೆ ಸಾಮಾನ್ಯವಾಗಿದ್ದರೂ, ಆಂತರಿಕ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಹೊಟ್ಟೆಬಾಕುತನದಿಂದ ದೊಡ್ಡ ಪ್ರಮಾಣದ ಮೆಣಸಿನಕಾಯಿ ಮಾರಾಟವಾಗದೇ ಹಾಗೇ ಉಳಿದಿದ್ದು, ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ರಸಗೊಬ್ಬರ ಕೀಟನಾಶಕಗಳ ಬೆಲೆ ಹೆಚ್ಚಳದಿಂದಾಗಿ ಮೆಣಸಿನಕಾಯಿ ಬೆಳೆಯಲು ಸಾಕಷ್ಟು ವೆಚ್ಚವಾಗುತ್ತಿರುವುದು ತಮಗೆ ಗೊತ್ತಿದೆ. ಇದರಿಂದ ಮೆಣಸಿನಕಾಯಿ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ” ಎಂದು ವಿವರಿಸಿದ್ದಾರೆ.

“ಕೇಂದ್ರ ಸರ್ಕಾರ ಆಂಧ್ರಪ್ರದೇಶದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ತೀರ್ಮಾನಿಸಿ ಆ ರೈತರ ರಕ್ಷಣೆಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, ಇದರಲ್ಲಿ ಕರ್ನಾಟಕದ ರೈತರು ಇದರಲ್ಲಿ ಸೇರ್ಪಡೆಯಾಗಿರುವುದಿಲ್ಲ. ಈ ಯೋಜನೆ ಅಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರಿದಿಸುವುದು ಅತ್ಯಂತ ಮುಖ್ಯವಾಗಿರುತ್ತದೆ. ಇದರಿಂದ ಕರ್ನಾಟಕದ ರೈತರಿಗೂ ಅನುಕೂಲವಾಗಲಿದೆ. ಆದ್ದರಿಂದ ಇದೊಂದು ಮಹತ್ವದ ಮತ್ತು ಜರೂರು ವಿಷಯವೆಂದು ಪರಿಗಣಿಸಿ ಕರ್ನಾಟಕರ ರಾಜ್ಯದ ಮೆಣಸಿನಕಾಯಿ ಬೆಳೆಯುವ ರೈತರ ರಕ್ಷಣೆಗೆ ಬರಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ, ಸುಸ್ಥಿರ ಕೃಷಿ ಪದ್ಧತಿಯೊಂದೇ ಪರಿಹಾರ

ರಸಗೊಬ್ಬರ ನೀಡಿ ಎಂದು ರೈತರು ಸರ್ಕಾರದ ಮುಂದೆ ಅಂಗಲಾಚುವ ಪರಿಸ್ಥಿತಿಯಲ್ಲಿದ್ದಾರೆ. ಇದು...

ಈರುಳ್ಳಿ ಇಳುವರಿಯಿಂದ ಹಿಗ್ಗಿದ ರೈತರು: ಬೆಲೆ ಕುಸಿತದಿಂದ ಕಂಗಾಲು

ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ...

ದಾವಣಗೆರೆ | ಯೂರಿಯಾ ರಸಗೊಬ್ಬರ ಪೂರೈಕೆಗೆ ಜಗಳೂರಿನ ಹಲವೆಡೆ ರೈತಸಂಘ ರಸ್ತೆ ತಡೆದು ಪ್ರತಿಭಟನೆ

*ಕರ್ನಾಟಕ ರಾಜ್ಯ ರೈತ ಸಂಘದ ಹಲವು ಸಂಘಟನೆಗಳು ಜಗಳೂರು ತಾಲೂಕಿನ ರೈತರಿಗೆ...

ದಾವಣಗೆರೆ | ಯೂರಿಯಾ ರಸಗೊಬ್ಬರ ಕೊರತೆ: ವಿತರಕ ಏಜೆನ್ಸಿ ವಿರುದ್ಧ ರೈತ ಸಂಘ ಪ್ರತಿಭಟನೆ

ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ...

Download Eedina App Android / iOS

X