ರೈತರಿಗೆ ಗುಡ್ ನ್ಯೂಸ್ | ಎಲ್ಲ ರೈತರಿಗೆ ಮತ್ತೆ ಕಿರು ನೀರಾವರಿಗೆ ಸಹಾಯಧನ: ಕೃಷಿ ಇಲಾಖೆ ಆದೇಶ

Date:

ಕಿರು ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲ ವರ್ಗದ ರೈತ ಫಲಾನುಭವಿಗಳು ಏಳು ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

- Advertisement -

ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿಲಿಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದ್ದ 9 ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PM-RKVY) ಎಂದು ಮರು ನಾಮಕರಣಗೊಳಿಸಿ ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ವ್ಯಾಪ್ತಿಗೆ ಒಳಪಡುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ PMKSI ಮತ್ತು PMMS ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ ರೂ.274 ಕೋಟಿ ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಇದರ ಅನುಕೂಲ ತಲುಪಲಿದೆ. ಹಾಗೆಯೇ ಟಾಪ್ಅಪ್ ಯೋಜನೆಯಡಿ ರೂ.252 ಕೋಟಿಗಳ ಅನುದಾನವನ್ನು ಸೂಕ್ಷ್ಮ ನೀರಾವರಿ ಸಾಧನ ಸಲಕರಣೆಗಳ ಆರ್ಥಿಕ ನೆರವಿಗಾಗಿ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ತಾಪಮಾನ ಏರಿಕೆ: ಭೂಮಿಗೆ ಬಂದಿರುವ ಜ್ವರ ಕಡಿಮೆ ಮಾಡುವ ಶಕ್ತಿ ಯಾರಿಗೂ ಇಲ್ಲ- ಅವಿನಾಶ್

ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿಯ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು...

ಮೂರು ವಾರಗಳಿಂದ ರಾಜ್ಯದ 122 ತಾಲೂಕುಗಳಾದ್ಯಂತ ಮಳೆ ಕೊರತೆ: ಶೇ.50ರಷ್ಟು ಬೆಳೆಹಾನಿ ಸಾಧ್ಯತೆ

ಸೆಪ್ಟೆಂಬರ್‌ನಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳು ಕಾಣದಿರುವುದರಿಂದ ಮುಂಬರುವ ವಾರಗಳಲ್ಲಿ ರಾಜ್ಯಾದ್ಯಂತ ಮಳೆ...

ಬರಪೀಡಿತ ತಾಲೂಕು ಘೋಷಣೆ: ಸರ್ಕಾರದ ಮಾನದಂಡಗಳು ಎಷ್ಟು ಸಮರ್ಪಕ?

ಕಳೆದ ಒಂದೆರಡು ತಿಂಗಳಿನ ಅವಧಿಯಲ್ಲಿ ಹಾವೇರಿ ಮತ್ತು ರಟ್ಟಿಹಳ್ಳಿ ತಾಲೂಕುಗಳಲ್ಲಿ  ಇಬ್ಬರು...

ಮುಂಗಾರು ಬಿತ್ತನೆ ಅವಧಿ ಅಂತ್ಯ: ರಾಜ್ಯದಲ್ಲಿ ಶೇ.80ರಷ್ಟು ಬಿತ್ತನೆ, ಇಳುವರಿ ಕುಂಠಿತವಾಗುವ ಸಾಧ್ಯತೆ

ದೇಶಾದ್ಯಂತ ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ 16 ಪ್ರತಿಶತ ಮಳೆ ಕಡಿಮೆಯಾಗಿದ್ದು, ಜೂನ್-ಆಗಸ್ಟ್‌ನಲ್ಲಿ 14...