ತುಮಕೂರು | ಎಲ್ ನಿನೋ ಎಫೆಕ್ಟ್‌ನಿಂದ ಮುಂಗಾರು ವಿಫಲ: ಪರ್ಯಾಯ ಬೆಳೆ ಬಿತ್ತನೆಗೆ ಕೃಷಿ ಇಲಾಖೆ ಸಲಹೆ

Date:

ಎಲ್ ನಿನೋ ಪ್ರಭಾವ ರಾಜ್ಯದ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದ್ದು, ಅದರ ನೇರ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಗೋಚರಿಸುತ್ತಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಬಿತ್ತನೆ ಚಟುವಟಿಕೆಗಳು ನಿಧಾನಗೊಂಡಿದ್ದು, ರೈತರು ಆತಂಕದಲ್ಲಿದ್ದಾರೆ. ಹವಾಮಾನ ಇಲಾಖೆ ಜಿಲ್ಲೆಯನ್ನು ಮಳೆ ಕೊರತೆಯ ಅಪಾಯದ ಪಟ್ಟಿಗೆ ಸೇರಿಸಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

- Advertisement -

ಮುಂದಿನ ದಿನಗಳಲ್ಲಿಯೂ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೃಷಿ ಇಲಾಖೆ ಈಗಾಗಲೇ ಪರ್ಯಾಯ ಬೆಳೆಗಳ ಕುರಿತು ತುರ್ತು ಕಾರ್ಯಯೋಜನೆ ರೂಪಿಸಲು ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜನವರಿ 1ರಿಂದ ಜೂನ್ 24ರವರೆಗೆ ಜಿಲ್ಲೆಯಲ್ಲಿ 178.20 ಮಿಮೀ ಮಳೆಯಾಗಬೇಕಿದ್ದರೆ 206.90 ಮಿಮೀ ಮಳೆಯಾಗಿದೆ. ಅಂಕಿ-ಅಂಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೂ, ಬಿತ್ತನೆಗೆ ಅಗತ್ಯವಿದ್ದ ಕಳೆದ 20 ದಿನಗಳಲ್ಲಿ ಮಳೆ ಕೈಕೊಟ್ಟಿದೆ. ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರು, ತುಮಕೂರು ಹಾಗೂ ತುರುವೇಕೆರೆ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಬಿತ್ತನೆ ಮುಂದೂಡಿದ್ದಾರೆ. ಗುಬ್ಬಿ ತಾಲೂಕಿನಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ತಿಪಟೂರು, ತುಮಕೂರು, ತುರುವೇಕೆರೆ ಮತ್ತು ಕುಣಿಗಲ್ ಭಾಗಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

3.20 ಲಕ್ಷ ಹೆಕ್ಟೇರ್ ಪೈಕಿ ಬಿತ್ತನೆಯಾಗಿದ್ದು, ಅಲ್ಪ ಪ್ರಮಾಣ ಜಿಲ್ಲೆಯ ಒಟ್ಟು ಕೃಷಿ ವಿಸ್ತೀರ್ಣ 3.20 ಲಕ್ಷ ಹೆಕ್ಟೇರ್. ಕಳೆದ ವರ್ಷ ಸುಮಾರು 1.70 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ ಬೆಳೆಯಲಾಗಿತ್ತು. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಸಿರಿಧಾನ್ಯಗಳಾದ ರಾಗಿ, ಜೋಳ, ಸಜ್ಜೆಯಂತಹ ಬೆಳೆಗಳು 2.08 ಲಕ್ಷ ಹೆಕ್ಟೇರ್ ಪೈಕಿ ಕೇವಲ 1,070 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿವೆ.

52,156 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿದ್ದ ದ್ವಿದಳ ಧಾನ್ಯ ಬೆಳೆಗಳು ಕೇವಲ 5,660 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿವೆ. ನೆಲಗಡಲೆ 43 ಸಾವಿರ ಹೆಕ್ಟೇರ್ ಪ್ರದೇಶದ ಪೈಕಿ 2,780 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 44,100 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿದ್ದ ಎಣ್ಣೆಕಾಳುಗಳ ಬೆಳೆ ಕೇವಲ 2,834 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಇದು ಮುಂಗಾರು ಕೃಷಿಯ ಮಂದಗತಿಯನ್ನು ಸ್ಪಷ್ಟವಾಗಿ ತೋರಿಸುತ್ತಿದೆ.

ಮಳೆ ತಡವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಕಡಿಮೆ ಅವಧಿಯ ಹಾಗೂ ಕಡಿಮೆ ನೀರು ಬೇಕಾಗುವ ಬೆಳೆಗಳನ್ನು ಬೆಳೆಯಲು ಸಲಹೆ ನೀಡಿದೆ.
ಆಗಸ್ಟ್ 15ರೊಳಗೆ ರಾಗಿ ಬಿತ್ತನೆ ಮಾಡುವಂತೆ ಸೂಚಿಸಿದ್ದು, ಜಿಪಿಯು-28, ಜಿಪಿಯು-66, ಎಂಎಲ್-365, ಪಿಆರ್-202 ರಾಗಿ ತಳಿಗಳು ಬಿತ್ತನೆಗೆ ಸೂಕ್ತವಾಗಿರುವುದಾಗಿ ಕೃಷಿ ಇಲಾಖೆ ತಿಳಿಸಿದೆ.

ಜಿಪಿಯು-26, ಜಿಪಿಯು-45, GPU-48 ರಾಗಿ ತಳಿಗಳನ್ನು ಆಗಸ್ಟ್ ಅಂತ್ಯದವರೆಗೆ ಬಿತ್ತನೆ ಮಾಡಬಹುದಾಗಿದ್ದು, ಬಿತ್ತನೆ ಬೀಜಗಳನ್ನು 18 ಗಂಟೆ ನೀರಿನಲ್ಲಿ ನೆನೆಸಿ, 24 ಗಂಟೆ ನೆರಳಿನಲ್ಲಿ ಒಣಗಿಸಿ ಬಿತ್ತನೆ ಮಾಡಿದರೆ ಉತ್ತಮ ಮೊಳಕೆ ಮೂಡುತ್ತದೆ. ಸಾಮಾನ್ಯಕ್ಕಿಂತ ಶೇ.15-20ಕ್ಕೂ ಅಧಿಕ ಬೀಜವನ್ನು ಬಿತ್ತುವಂತೆ ಸೂಚಿಸಲಾಗಿದೆ.

ಅಲಸಂದೆ, ಹುರುಳಿ, ಹೆಬ್ಬಾಳ ಅವರೆ, ಹಿಂಗಾರಿ ಕಡಲೆ, ಮೇವಿನ ಜೋಳದಂತಹ ಬೆಳೆಗಳನ್ನು ಬಿತ್ತನೆ ಮಾಡಬಹುದು. ಮಳೆ ಮತ್ತಷ್ಟು ವಿಳಂಬವಾದರೆ ಈ ಬೆಳೆಗಳು ಉತ್ತಮ ಪರ್ಯಾಯವಾಗಲಿವೆ. ಕಡಿಮೆ ನೀರಿದ್ದರೂ ಈ ಬೆಳೆಗಳನ್ನು ಬೆಳೆಯಬಹುದು.

ರಾಗಿ ಬಿತ್ತನೆಯಾಗಿ ಮೊಳಕೆ ಸಮರ್ಪಕವಾಗಿ ಬರದಿದ್ದರೆ ಸಸಿ ಮಡಿಗಳಲ್ಲಿ ಬೆಳೆಸಿ ನಾಟಿ ಮಾಡುವಂತೆ ಕೃಷಿ ಇಲಾಖೆ ಸಲಹೆ ನೀಡಿದೆ. ಮಧ್ಯಂತರ ಬರ ಪರಿಸ್ಥಿತಿಯಲ್ಲಿ ಉಕ್ಕೆ ಸಾಲು, ನೀರು ಸಂಗ್ರಹಿಸುವ ತೋಡು ಹಾಗೂ ಕಳೆ ನಿಯಂತ್ರಣ ಕ್ರಮಗಳನ್ನು ಅನುಸರಿಸಿದರೆ ಬೆಳೆ ಹಾನಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

“ಕಡಿಮೆ ನೀರಿನ ಅವಶ್ಯಕತೆ ಇರುವ ಬೇಳೆಕಾಳುಗಳು, ಎಣ್ಣೆಕಾಳುಗಳು ಹಾಗೂ ಸಿರಿಧಾನ್ಯಗಳನ್ನು ಬೆಳೆಯಲು ರೈತರನ್ನು ಉತ್ತೇಜಿಸಲಾಗುತ್ತಿದೆ. ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಸೂಕ್ತ ತಳಿಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಎಲ್ಲ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು” ಎಂದು ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಎಸ್ ಕಳ್ಳೆನ್ನವರ ತಿಳಿಸಿದ್ದಾರೆ.

“ಬಿತ್ತನೆ ಮಾಡುವ ಸಮಯದಲ್ಲಿ ಸರಿಯಾಗಿ ಮಳೆಯಾಗಲಿಲ್ಲ. ಹವಾಮಾನ ಇಲಾಖೆ ಕೂಡ ಮಳೆ ಅಭಾವದ ಮುನ್ಸೂಚನೆ ನೀಡಿರುವುದರಿಂದ ಈ ಬಾರಿ ರೈತರು ಬಿತ್ತನೆಗೆ ಹಿಂದೇಟು ಹಾಕಿದ್ದಾರೆ. ಮಳೆ ಬಂದ ಕೂಡಲೇ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ರೈತ
ಲೋಕೇಶ್ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಬೆಳಗಾವಿ | 10 ಎಕರೆಯಲ್ಲಿ ಚೆಂಡು ಹೂವು ಬೆಳೆ: ಹವಾಮಾನ ವೈಪರೀತ್ಯದ ನಡುವೆಯೂ ರೈತ ಯಶಸ್ವಿ

ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕೃಷಿ ಸಂಕಷ್ಟದ ಹಾದಿಯಲ್ಲಿದೆ. ಮುಂದಿನ ಕೆಲವು ವಾರಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬಿತ್ತನೆ ಮತ್ತಷ್ಟು ಕುಂಠಿತವಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೃಷಿ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸುವುದು, ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡುವುದು ಹಾಗೂ ಬೆಳೆ ವಿಮೆ ಮಾಡಿಸಿಕೊಳ್ಳುವುದು ರೈತರಿಗೆ ಅತ್ಯಗತ್ಯವಾಗಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...