ರಾಜ್ಯದ ಕೃಷಿ ಬಲವರ್ಧನೆಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮ್ಮತಿ: ಎನ್‌ ಚಲುವರಾಯಸ್ವಾಮಿ

Date:

ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.

- Advertisement -

ಬೆಂಗಳೂರು ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ರಾಜ್ಯದಲ್ಲಿ ಕೃಷಿ ಇಲಾಖೆ ಶೇ.99 ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇ.124ರಷ್ಟು ಅನುದಾನ ಬಳಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಭಾರಿಯೂ ಇದೆ ರೀತಿ ಹಣಕಾಸಿನ ನೆರವು ಒದಗಿಸಬೇಕೆಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಭಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲ್ಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಪೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು.

ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಅವರು ಜ23 ರಿಂದ ಜ25 ರವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌವ್ಹಾನ್‌ ಅವರನ್ನು ಅಹ್ವಾನಿಸಿದರು.

ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನು (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಚಲುವರಾಯಸ್ವಾಮಿರವರು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು. ಈ ಹಿಂದೆ ಜಾರಿಗೆ ಬಂದ ಆತ್ಮ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ನಂತರ ಹೆಚ್ಚುವರಿಯಾಗಿ 59 ತಾಲ್ಲೂಕುಗಳು ರಚನೆಯಾಗಿರುವುದರಿಂದ ಹೊಸದಾಗಿ 177 ಸಹಾಯಕ ತಾಂತ್ರಿಕ ನಿರ್ವಾಹಕರು ಅಗತ್ಯವಿದ್ದು ಅದಕ್ಕೆ ಮಂಜೂರಾತಿಯೊಂದಿಗೆ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿ ಕೋರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿ ಟಿ ರವಿಯನ್ನು ರಕ್ಷಿಸಲು ಹೋಗಿ ತಮ್ಮ ಘನತೆ ಕಳೆದುಕೊಂಡರೇ ಸಭಾಪತಿ ಹೊರಟ್ಟಿ?

ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿ.ಎಂ.ಕೆ.ಎಸ್.ವೈ – ಪಿ.ಡಿ.ಎಂ.ಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಚಲುವರಾಯಸ್ವಾಮಿರವರು ಕೇಂದ್ರ ಸಚಿವರ ಗಮನ ಸೆಳೆದರು.

ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈಗಾಗಲೇ ವಿಶ್ವಬ್ಯಾಂಕ್ ನೆರವಿನೊಂದಿಗೆ ರೂ.567.98 ಕೋಟಿಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ ಸಚಿವರು, “ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಶಿವರಾಜ್ ಸಿಂಗ್ ಚೌವ್ಹಾನ್ ಅವರು ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ದವಿದೆ. ಆರ್ಥಿಕ ವರ್ಷ ಕೊನೆಯಾಗುತ್ತಿದ್ದು, ಒದಗಿಸುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ ಹಣ ಸದ್ಭಳಕೆ ಪ್ರಮಾಣ ಪತ್ರವನ್ನು ನೀಡಿದ ಕೂಡಲೇ ಕೃಷಿ ಹಾಗೂ ಇತರೆ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಗಳನ್ನು ಸಹ ಒದಗಿಸಲಾಗುವುದು” ಎಂದು ಹೇಳಿದರು.

ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಜಿಬಿಎ ಆಡಿಟ್ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳ ಪೈಕಿ...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...