ರಸಗೊಬ್ಬರ, ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ: ರಾಜ್ಯಾದ್ಯಂತ ಕಠಿಣ ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ

Date:

Advertisements

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ರಾಜ್ಯ ಕೃಷಿ ಇಲಾಖೆಯು ರಾಜ್ಯಾದ್ಯಂತ ಕಠಿಣ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್(FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ

ಬನ್ನೂರಿನ ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್‌ಪ್ರೈಸಸ್‌ನಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ಕೀಟನಾಶಕ

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ

ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕ ದೇವರಾಜು ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದು, ನಂಜನಗೂಡಿನ ಶ್ರೀ ಇಂಡಸ್ಟ್ರೀಸ್‌ನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು

ದಾವಣಗೆರೆಯ ADA(ವಿಜಿಲೆನ್ಸ್ 1&2) ಶಿಫಾರಸಿನ ಮೇರೆಗೆ, ದಾವಣಗೆರೆಯ ಐವರು ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ ಇಬ್ಬರು ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ(MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ ಕೆಲವು ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ.

ಕೀಟನಾಶಕ 1

ಲೈಸೆನ್ಸ್‌ ರದ್ದಾದ ಸಗಟು ಮಾರಾಟಗಾರರು

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಕರ್ನಾಟಕ ಕೃಷಿ ಇಲಾಖೆಯು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳ ಲಭ್ಯತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ. ರಾಜ್ಯಾದ್ಯಂತ ಕಂದಾಯ ಮತ್ತು ಕೃಷಿ ಅಧಿಕಾರಿಗಳು ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ರೈತರಿಗೆ ನಿಗದಿತ ಬೆಲೆಯಲ್ಲಿ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು ಇಲಾಖೆಯು ಕಟಿಬದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X