ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

Date:

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಬುಧವಾರ 9ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಸುಮಾರು 10,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿ, ಸುರಿಯುವ ಮಳೆ ಹಾಗೂ ಅನಾರೋಗ್ಯವನ್ನೂ ಲೆಕ್ಕಿಸದೆ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.

- Advertisement -

ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಫ್ರೀಡಂ ಪಾರ್ಕ್‌ನ ಧರಣಿ ಸ್ಥಳ ತೊಯ್ದು ಹೋಗಿದ್ದು, ಮಲಗುವ ಜಾಗವೆಲ್ಲಾ ಒದ್ದೆಯಾಗಿದೆ. ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದರೂ, ನೀಲಿ ಟಾರ್ಪಾಲಿನ್ ಶೀಟ್‌ಗಳ ಕೆಳಗೆ ಆಶ್ರಯ ಪಡೆದ ಆಶಾ ಕಾರ್ಯಕರ್ತೆಯರು ಪರಸ್ಪರ ಆಸರೆಯಾಗಿ ನಿಂತಿದ್ದಾರೆ. ಮನೆಯಲ್ಲೇ ಮಕ್ಕಳನ್ನು ನೋಡಿಕೊಳ್ಳುವವರಿಲ್ಲದ ಕಾರಣ ಹಲವು ತಾಯಂದಿರು ತಮ್ಮ ಪುಟ್ಟ ಕಂದಮ್ಮಗಳನ್ನೂ ಧರಣಿ ಸ್ಥಳಕ್ಕೆ ಕರೆತಂದಿದ್ದಾರೆ. ಹವಾಮಾನ ವೈಪರೀತ್ಯದಿಂದ ಕೆಲವು ಮಕ್ಕಳಿಗೆ ಶೀತ, ಜ್ವರ ಕಾಣಿಸಿಕೊಂಡಿದ್ದು, ಸ್ಥಳದಲ್ಲೇ ಇರುವ ವೈದ್ಯಕೀಯ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಬಹುತೇಕ ಕಾರ್ಯಕರ್ತೆಯರು ಒಂಟಿ ತಾಯಂದಿರಾಗಿದ್ದು, ಮದ್ಯವ್ಯಸನಿ ಪತಿಯ ಸಂಸಾರವನ್ನು ನಿಭಾಯಿಸುತ್ತಿರುವವರಾಗಿದ್ದಾರೆ. ಮನೆ ಬಾಡಿಗೆ ಮತ್ತು ಮಕ್ಕಳ ಶಾಲಾ ಶುಲ್ಕ ಕಟ್ಟಲು ಇವರುಗಳ ದುಡಿಮೆಯೇ ಆಧಾರವಾಗಿದೆ. ಪೋಲಿಯೊ ಲಸಿಕೆ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಆರೋಗ್ಯ ಸೇವೆಗಳನ್ನು ನಿರ್ವಹಿಸುವ ಕಾರ್ಯಕರ್ತೆಯರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ” ಎಂದು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

2025ರ ಜನವರಿ 10ರಂದು ಸರ್ಕಾರವು ಮಾಸಿಕ 10,000 ರೂ. ಗೌರವಧನ ಹಾಗೂ ಹೆಚ್ಚುವರಿ ಕೆಲಸಕ್ಕೆ ಪ್ರತ್ಯೇಕ ವೇತನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಆ ಭರವಸೆ ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಕಾರಣ, ಈಗ ಮಾಸಿಕ 15,000 ರೂ. ನಿಶ್ಚಿತ ಗೌರವಧನ, ಗಂಭೀರ ಅನಾರೋಗ್ಯ ಅಥವಾ ಅಪಘಾತದ ಸಂದರ್ಭದಲ್ಲಿ ವೈದ್ಯಕೀಯ ನೆರವು ನೀಡಬೇಕೆಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಅಲ್ಲದೆ, ಕೆಲಸದ ಮಾಹಿತಿ ದಾಖಲಿಸಲು ಮೊಬೈಲ್ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿರುವ ಅವರು, ಸೂಕ್ತ ತರಬೇತಿ, ಮೊಬೈಲ್ ಸಾಧನ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷೆ ರಮಾ ಟಿ.ಸಿ. ಅವರ ಮಾಹಿತಿಯಂತೆ, ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದು ಸುತ್ತು ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಎರಡು ಸುತ್ತಿನ ಮಾತುಕತೆಗಳು ನಡೆದಿವೆ. ಮಂಗಳವಾರ ಮುಖ್ಯಮಂತ್ರಿಗಳು ಜಪಾನ್ ಪ್ರವಾಸದಲ್ಲಿದ್ದರೂ ವಿಡಿಯೋ ಕರೆ ಮೂಲಕ ಕಾರ್ಯಕರ್ತೆಯರೊಂದಿಗೆ ಮಾತನಾಡಿ, ಅಧಿವೇಶನದ ವೇಳೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, ಕೇವಲ ಮೌಖಿಕ ಭರವಸೆಗಳನ್ನು ನಂಬಿ ಹಿಂದಿರುಗಲು ಸಿದ್ಧರಿಲ್ಲದ ಕಾರ್ಯಕರ್ತೆಯರು, ಸರ್ಕಾರದಿಂದ ಸ್ಪಷ್ಟ ಲಿಖಿತ ಭರವಸೆ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...