ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ವಿಧಾನಮಂಡಲ ಚಳಿಗಾಲ ಅಧಿವೇಶನದ ಕಲಾಪಗಳಲ್ಲಿ ವಿಪಕ್ಷದವರ ಹುಳುಕಿನ ನಡುವೆ ಅವರ ಆರೋಪಗಳಿಗೆ ಮೊನಚು ಇರಲಿಲ್ಲ. ಆಡಳಿತಾತ್ಮಕವಾಗಿ ಮತ್ತು ರಾಜಕೀಯವಾಗಿ ಏಟು ಎದಿರೇಟು ನೀಡಿ ಸರ್ಕಾರ ಸುಮ್ಮನಾಯಿತು. ಉತ್ತರ ಕರ್ನಾಟಕದ ಜನರ ಬೆಟ್ಟದಷ್ಟು ನಿರೀಕ್ಷೆಗಳು...
ಬಿಜೆಪಿ, ಕಾಂಗ್ರೆಸ್ ಹಾಗೂ ಮೈತ್ರಿಕೂಟದ ಜೆಡಿಎಸ್ ಸರ್ಕಾರಗಳೆಲ್ಲವೂ ವಕ್ಫ್ ಆಸ್ತಿ ಮರುವಶಕ್ಕೆ ಪಡೆಯಲು ಹಲವು ಕ್ರಮಗಳನ್ನು ತೆಗೆದುಕೊಂಡಿವೆಯಾದರೂ ಯಾವುದು ತಾರ್ಕಿಕ ಅಂತ್ಯ ಕಂಡಿಲ್ಲ. ಶಾಶ್ವತ ಪರಿಹಾರ ಎಂಬುದು ಮೂರೂ ಪಕ್ಷಗಳಿಗೆ ಬೇಡವಾದ ಸಂಗತಿ....
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದ ಕಿಚ್ಚು ವಿಧಾನಮಂಡಲ ಚಳಿಗಾಲ ಅಧಿವೇಶನದ ಕಲಪಾಗಳನ್ನು ಸುಡುತ್ತಿದೆ. ಸದನದ ಒಳಗೂ ಮತ್ತು ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟದ್ದೇ ಈಗ ಹೆಚ್ಚು ಚರ್ಚೆಯಾಗುತ್ತಿದೆ.
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ...
ಕೇಂದ್ರದ ಜೊತೆಗೆ ರಾಜ್ಯ ಸರ್ಕಾರ ಈಗ ಎಷ್ಟೇ ಪತ್ರ ವ್ಯವಹಾರ ನಡೆಸಿದರೂ ಪ್ರಸಕ್ತ ಸಾಲಿಗೆ ಒಮ್ಮೆ ನಿಗದಿಯಾದ ಬೆಂಬಲ ಬೆಲೆ ಮತ್ತೆ ಹೆಚ್ಚಳವಾಗಲ್ಲ ಎನ್ನುತ್ತಿದ್ದಾರೆ ತಜ್ಞರು. ಜೊತೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ...
ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ ಬೆಳೆಯುವುದರಿಂದ ಅದರಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ರುಚಿಯಲ್ಲೂ ಹೆಚ್ಚುಗಾರಿಕೆ ಇರುವ ಕಲಬುರಗಿ...