ಮಹಿಳೆ ಹೊಟ್ಟೆಯಲ್ಲಿ 2.1 ಕೆ‌ಜಿ ತೂಕದ ಗಡ್ಡೆ ಪತ್ತೆ; ಚಿಟಗುಪ್ಪಿ ಆಸ್ಪತ್ರೆ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿ

Date:

ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಇದೀಗ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 2.1 ಕೆ‌ಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತಗೆಯುವಲ್ಲಿ ಯಶಸ್ವಿಯಾಗಿದೆ.

- Advertisement -

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಚಿಟಗುಪ್ಪಿ ಆಸ್ಪತ್ರೆಯ ವೈದ್ಯರು ತಮ್ಮಲ್ಲಿರುವ ಅಲ್ಪ ಸೌಲಭ್ಯದಲ್ಲಿಯೇ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಗೆ ಮರುಜೀವ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಇಲ್ಲಿ ವಿಶೇಷವಾಗಿ ಮಹಿಳೆಯರಿಗೆ ಸುರಕ್ಷಿತ ಹೆರಿಗೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಸೇರಿ ವಿವಿಧ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಫೈಬ್ರಾಯ್ಡ್ ಚಿಕಿತ್ಸೆಗೆ ದಾಖಲಾದ ಮಹಿಳೆಗೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡೆಪ್ಪನವರ ನೇತೃತ್ವದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಸಲಾಗಿದೆ.

ಮಹಿಳೆಯೊಬ್ಬರು ರಕ್ತಹೀನತೆಯಿಂದ ಬಳಲುತ್ತಿದ್ದರು.‌ ಇದರಿಂದ ಮಹಿಳೆ ಅತಿಯಾದ ಸುಸ್ತು, ನಡೆದಾಡಲು ಆಗದ ಪರಿಸ್ಥಿತಿಯಲ್ಲಿದ್ದರು. ಸಾಕಷ್ಟು ಖಾಸಗಿ ಆಸ್ಪತ್ರೆಗೆ ಅಲೆದಾಡಿ ಈ ಮಹಿಳೆ ಚಿಟಗುಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಮಹಿಳೆಯ ಹೊಟ್ಟೆಯಲ್ಲಿ ಸರಿಸುಮಾರು 2.1 ಕೆಜಿಯಷ್ಟು ಫೈಬ್ರಾಯ್ಡ್ ಗಡ್ಡೆ ಇರುವುದು ಪತ್ತೆಯಾಗಿದ್ದು, ಬಳಿಕ ಡಾ. ಶ್ರೀಧರ ದಂಡೆಪ್ಪನವರ ಅವರು ಮಹಿಳೆಗೆ ಸರಿಸುಮಾರು ಒಂದೂವರೆ ತಾಸು ಶಸ್ತ್ರಚಿಕಿತ್ಸೆ ಮಾಡಿ ಗಡ್ಡೆಯನ್ನು ಹೊರತಗೆದಿದ್ದಾರೆ.

ಈಗ ಮಹಿಳೆ ಸುರಕ್ಷಿತವಾಗಿದ್ದಾರೆ. ಈ ಚಿಕಿತ್ಸೆಯನ್ನು ಲ್ಯಾಪರೋಸ್ಕೋಪಿಕ್ ಅಂದರೆ ಉದರ ದರ್ಶಕದಿಂದ ಯಶಸ್ವಿಯಾಗಿ ನಡೆಸಿದ್ದಾರೆ. ಇವರಿಗೆ ಆಸ್ಪತ್ರೆ ಸಿಬ್ಬಂದಿ ಸಾಥ್ ಕೊಟ್ಟಿದ್ದು, ಮಹಿಳೆಯೊಬ್ಬರ ಜೀವ ಉಳಿಸಿದ್ದಾರೆ.

ಇದನ್ನೂ ಓದಿದ್ದೀರಾ? ರಾಯಚೂರು | ಡ್ರಗ್ಸ್ ಸೇವನೆ ಆರೋಗ್ಯಕ್ಕೆ ಮಾರಕ;ಎಸ್ ಪಿ ಎಂ.ಪುಟ್ಟಮಾದಯ್ಯ

“ಈಗಾಗಲೇ ಸಾಕಷ್ಟು ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು. 2.1 ಕೆಜಿ ಗಡ್ಡೆಯನ್ನು ಒಂದೂವರೆ ಗಂಟೆ ನಿರಂತರ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದು, ರೋಗಿ ಗುಣಮುಖರಾಗಿ ಹೋಗಿದ್ದಾರೆ” ಎಂದು ಡಾ. ಶ್ರೀಧರ ದಂಡೆಪ್ಪನವರ್ ತಿಳಿಸಿದ್ದಾರೆ.

“ನಮಗೂ ಇಂಥ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿದ್ದಕ್ಕೆ ಖುಷಿ ಇದೆ. ಸಣ್ಣ ಆಸ್ಪತ್ರೆಯಾದರೂ ಕೂಡ ಈ ಆಸ್ಪತ್ರೆಗೆ ಸಾಕಷ್ಟು ದಾನಿಗಳು ಬೇಕಾದ ವೈದ್ಯಕೀಯ ಉಪಕರಣಗಳನ್ನು ಕೊಡುತ್ತಿದ್ದಾರೆ. ಇವೆಲ್ಲವನ್ನೂ ಬಳಸಿಕೊಂಡು ರೋಗಿಗಳಿಗೆ ಉತ್ತಮ ಸೇವೆ ನೀಡುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...