ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

Date:

  • ‘ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟ ಸರ್ಕಾರ’
  • ‘ಕೆಆರ್‌ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು’

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಸೂಚನೆ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂ ಕೋರ್ಟ್‌ ಕರ್ನಾಟಕಕ್ಕೆ ಸೂಚಿಸಿದ ಹಿನ್ನೆಲೆಯಲ್ಲಿ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, “ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ & ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ. ಆ.10ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು. ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಸರ್ಕಾರ ರಕಾರ ಹಾಗೆ ಮಾಡಲೇ ಇಲ್ಲ. ಸುಪ್ರೀಂಕೋರ್ಟ್ ಕಡೆ ಮುಖ ಮಾಡದೆ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶವನ್ನೇ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟಿತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುಪ್ರೀಂ ಕೋರ್ಟ್‌ ಸೂಚನೆ ಗಾಯದ ಮೇಲೆ ಬರೆ ಎಳೆದಂತಾಗಿದೆ: ಸಿ ಟಿ ರವಿ

“ಸರ್ಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ & ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಮಾಡಿತು” ಎಂದು ದೂರಿದ್ದಾರೆ.

“ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ. ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ತುರ್ತು ಅರ್ಜಿ ಸಲ್ಲಿಸಲಿ

“ಸೆ.13ರಿಂದ ನಿತ್ಯವೂ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರ್ಕಾರವು; ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು” ಎಂದು ಸಲಹೆ ನೀಡಿದ್ದಾರೆ.

“ಸರ್ಕಾರ ವಕೀಲರು ಹೇಳಿದರಂತೆ ಕೇಳಿ ಜನರ ಹಿತ ಕಡೆಗಣಿಸಿದೆ. ಯಾವ ಕಾರಣಕ್ಕೂ ನೀರು ಬಿಡಬಾರದಿತ್ತು. ಕೋರ್ಟ್ ಆದೇಶಕ್ಕೆ ಕಾದು ಕ್ರಮ ಜರುಗಿಸಬೇಕಿತ್ತು. ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ವರ್ತಿಸಿದೆ ಸರ್ಕಾರ. ವಕೀಲರ ಮಾತುಗಳನ್ನು ಕೇಳಿಕೊಂಡು ನೀರು ಬಿಡುತ್ತಾ ಹೋದರೆ ಅದಕ್ಕೆ ಕೊನೆ ಮೊದಲು ಇರುವುದಿಲ್ಲ. ಹಾಗಾದರೆ ಸರ್ಕಾರ ಅನ್ನೋದು ಯಾಕೆ? ವಿಷಯ ಎಲ್ಲಿ ಶುರುವಾಯಿತೋ ಮತ್ತೆ ಅಲ್ಲಿಗೆ ಬಂದು ನಿಂತಿರುವುದಕ್ಕೆ ಯಾರು ಹೊಣೆ” ಎಂದು ಪ್ರಶ್ನಿಸಿದ್ದಾರೆ.

“ಕೆಆರ್‌ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ! ಆಗ ಉಳಿಯುವುದು 13 ಟಿಎಂಸಿ!! ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು? ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು? ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ” ಎಂದು ಕಿಡಿಕಾರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನೀವು ಉತ್ತಮರ ಅಲ್ಲ ನಿಮ್ಮನ್ನು ಮೂಲೆಯಲ್ಲಿ ಮಾಡಿದ ಮತದಾರರು ಉತ್ತಮರ ಮೊದಲು ಹೇಳಿ ಸಾರ್.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್,...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...