ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ) ಗುಣಮಟ್ಟದ ಉದ್ದಿನಕಾಳು ಖರೀದಿಸಲು ನಿರ್ಧರಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ಸ್ಥಾಪಿಸಿರುವ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಬಾಗಲಕೋಟೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಅಧಿಸೂಚನೆಯಂತೆ ಆದೇಶ ಹೊರಡಿಸಿದ ದಿನಾಂಕದಿಂದ 80 ದಿನಗಳವರೆಗೆ ರೈತರ ನೋಂದಣಿಗೆ ಹಾಗೂ 90 ದಿನಗಳವರೆಗೆ ಉದ್ದಿನಕಾಳು ಖರೀದಿಗೆ ಕಾಲಾವಕಾಶ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ನೋಂದಣಿ ಪ್ರಕ್ರಿಯೆಯ ಜತೆಗೆ ಖರೀದಿ ಕಾರ್ಯವನ್ನೂ ಆರಂಭಿಸಲಾಗುತ್ತಿದೆ ಎಂದು ಹೇಳಿದರು.ರೈತರು ಬೆಳೆದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ ಉದ್ದು ಖರೀದಿಸಲಾಗುತ್ತದೆ. ಎಫ್‌ಎಕ್ಯೂ ಗುಣಮಟ್ಟದ ಕಾಳು ಖರೀದಿಗೆ ರೈತರ ಜಮೀನಿನ ವಿವರಗಳನ್ನು ತಂತ್ರಾಂಶದಲ್ಲಿ ಲಭ್ಯವಿರುವ ಮಾಹಿತಿಯೊಂದಿಗೆ ಪರಿಶೀಲಿಸಿ ಖರೀದಿ ಪ್ರಮಾಣ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಗುಣಮಟ್ಟದ ಮಾನದಂಡಗಳೇನು?ಉದ್ದಿನಕಾಳು ಖರೀದಿಗೆ ನಿಗದಿಪಡಿಸಿರುವ ಎಫ್‌ಎಕ್ಯೂ ಗುಣಮಟ್ಟದ ಮಾನದಂಡಗಳ ಪ್ರಕಾರ, ಧೂಳು, ಹರಳು, ಹೊಟ್ಟು ಸೇರಿದಂತೆ ಅನ್ಯ ವಸ್ತುಗಳು ಶೇ.2, ಬೆರೆಕೆ ಮಿಶ್ರಣ ಶೇ.3, ಹಾಳಾದ ಕಾಳುಗಳು ಶೇ.3, ಒಡೆದ ಕಾಳುಗಳು ಶೇ.4, ಅಪೂರ್ಣ ಕಾಳುಗಳು ಶೇ.3 ಹಾಗೂ ಹುಳುಕಾದ ಕಾಳುಗಳು ಶೇ.4ರ ಮಿತಿಯೊಳಗಿರಬೇಕು. ಕಾಳಿನ ತೇವಾಂಶ ಶೇ.12ಕ್ಕಿಂತ ಹೆಚ್ಚಿರಬಾರದು ಎಂದು ಸ್ಪಷ್ಟಪಡಿಸಿದರು.

ನೋಂದಣಿಗೆ ಅಗತ್ಯ ದಾಖಲೆಗಳುಜಿಲ್ಲೆಯ ರೈತರು ತಮ್ಮ ಸಮೀಪದ ಖರೀದಿ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಪಹಣಿ ಪತ್ರಿಕೆ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ಬಾಗಲಕೋಟೆ ಶಾಖೆಯ ವ್ಯವಸ್ಥಾಪಕರನ್ನು ಮೊ. 9449864458 ಅಥವಾ ಸಹಾಯಕ ನಿರ್ದೇಶಕರನ್ನು ಮೊ. 9035353912 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಹಕಾರ ಇಲಾಖೆಯ ಉಪ ನಿಬಂಧಕ ದಾನಯ್ಯ ಹಿರೇಮಠ, ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಭಾವಿಹಾಳ, ಕಾರ್ಯದರ್ಶಿಗಳಾದ ವಿ.ಡಿ. ಪಾಟೀಲ, ಆರ್.ಎಂ. ದಂಡಿನ, ರವಿ ರಾಠೋಡ, ಪಟ್ಟಣಶೆಟ್ಟಿ, ಶರಣರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...