ಬೆಂಗಳೂರಿನ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿರುವ ಇವರು ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ಗೆ ಮಹಿಳೆಯೊಬ್ಬರನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿ ಜತೆಗೆ ವಿಡಿಯೋ ಚಿತ್ರೀಕರಿಸಿ ಬೆದರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
2018ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ್ ಪೇಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೇಟಿಂಗ್ ಆ್ಯಪ್ ಬಳಸಿ ಹುಡುಗರಿಂದ ಸುಲಿಗೆ; ಇಬ್ಬರ ಬಂಧನ
ಕೆ.ಶಿವಕುಮಾರ ರೆಡ್ಡಿ ವಿರುದ್ಧ 2020ರಲ್ಲಿ ಹೈದರಾಬಾದ್ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.