ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ 1,020 ಉದ್ಯೋಗಾವಕಾಶ: ಯತಿಕಾರ್ಪ್ ಸಂಸ್ಥೆಯಿಂದ ಅರ್ಜಿ ಆಹ್ವಾನ

Date:

ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಪ್ರತಿಷ್ಠಿತ ಯತಿಕಾರ್ಪ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ 1,020 ಉದ್ಯೋಗವನ್ನು ಸೃಷ್ಟಿಸಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

- Advertisement -

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯತಿಕಾರ್ಪ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ಸಂಸ್ಥಾಪಕ, ಸಿಇಒ ಯತೀಶ ಕೆ.ಎಸ್‌. ಅವರು ಈ ಬಗ್ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸರಕಾರಿ ಸಂಸ್ಥೆಗಳು, ಬಹುರಾಷ್ಟ್ರೀಯ ಕಂಪೆನಿಗಳು, ಭಾರತೀಯ ನೌಕಾಪಡೆ, ಕೈಗಾ ಅಣುಸ್ಥಾವರ ಮೊದಲಾದ ಪ್ರತಿಷ್ಠಿತ ಸಂಸ್ಥೆಗಳಿಗೆ ದಶಕದಿಂದ ತಂತ್ರಜ್ಞಾನ ಸೇವೆಯನ್ನು ನೀಡುತ್ತಿರುವ ಪ್ರತಿಷ್ಠಿತ ಯತಿಕಾರ್ಪ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆ, ಸಾಮಾನ್ಯ ಜನರಿಗೂ ಎಐ ತಂತ್ರಜ್ಞಾನದ ಪ್ರಯೋಜನಗಳನ್ನು ತಲುಪಿಸುವ ಮಹತ್ವದ ಯೋಜನೆಯೊಂದನ್ನು ರೂಪಿಸಿದೆ. ಈ ಯೋಜನೆಯಂತೆ ರಾಜ್ಯದಲ್ಲಿ 1,020 ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ದೊರಕಲಿದೆ ಎಂದು ಅವರು ಹೇಳಿದರು.

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಪದವೀಧರರಾಗಿರಬೇಕು, ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಪ್ರತೀ ತಾಲೂಕಿನಿಂದ ನಾಲ್ವರು ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳಿಗೆ ತಮ್ಮ ತಾಲೂಕಿನಿಂದಲೇ ಕೆಲಸ ಮಾಡಲು ಅವಕಾಶ ಇರಲಿದೆ ಎಂದು ತಿಳಿಸಿದರು.

ಆಯ್ಕೆಯಾದ ಅಭ್ಯರ್ಥಿಗಳು ಆರ್ಟಿಫಿಶಯಲ್‌ ಇಂಟೆಲಿಜೆನ್ಸ್‌ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮೊದಲ 6 ತಿಂಗಳು ಫಿಲ್ಡ್‌ನಲ್ಲಿದ್ದು ಕಾರ್ಯನಿರ್ವಹಿಸಲು ಸಿದ್ಧರಿರಬೇಕು. 6 ತಿಂಗಳು ಫೀಲ್ಡ್‌ನಲ್ಲಿ ಅನುಭವ ಪಡೆದುಕೊಂಡ ಬಳಿಕ ಅವರನ್ನು ಸಂಸ್ಥೆಯ ಖಾಯಂ ಉದ್ಯೋಗಿಯಾಗಿ ಕಚೇರಿಗೆ ನೇಮಿಸಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ಆನ್ಲೈನ್‌ ಮತ್ತು ವೈಯಕ್ತಿಕ ಇಂಟರ್‍‌ವ್ಯೂ ಮೂಲಕ ನಡೆಯಲಿದೆ ಎಂದು ಅವರು ತಿಳಿಸಿದರು.

ಆಸಕ್ತರು ಸಂಸ್ಥೆಯ ವೆಬ್‌ಸೈಟ್‌ https://yaticorp.com/ai-career/, ಇಮೇಲ್‌ [email protected] ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ 1st Floor, 677, suite 899, 13th cross, sector – 1, HSR layout, Bangalore, 560102, door no.: 4-152/14(3), 2nd floor, sri ram building, kottara chowki, mangalore – 575006 ವಿಳಾಸವನ್ನು ಸಂಪಕರ್ಕಿಸಬಹುದಾಗಿದೆ. ಮೇ 23 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಾಜೆಕ್ಟ್‌ ಮ್ಯಾನೇಜರ್‍‌ ಕೃಪಾ ಕೆ., ಹ್ಯೂಮನ್‌ ರಿಸೋರ್ಸ್‌ ಭೂಮಿಕಾ ಪೂಜಾರಿ, ಸೋಮಶೇಖರ್‍‌ ಅಯ್ಯ, ಇಂದ್ರೇಶ್‌ ಎಂ.ಎಸ್‌. ಉಪಸ್ಥಿರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...