2020ರ ಬೆಂಗಳೂರು ಗಲಭೆ ಪ್ರಕರಣ: ಯುಎಪಿಎ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

Date:

2020ರಲ್ಲಿ ನಡೆದಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದ್ದ ವಾಜಿದ್ ಪಾಷಾ ಕೆ.ಎಂ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಈ ಪ್ರಕರಣದಲ್ಲಿ ವಿಚಾರಣೆಯಲ್ಲಿನ ವಿಳಂಬವನ್ನು ಜಾಮೀನು ನೀಡಲು ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

- Advertisement -

ಬಂಧಿತ ಆರೋಪಿ ವಾಜಿದ್ ಪಾಷಾ ಅವರು, ಪ್ರಕರಣದಲ್ಲಿ ತಮ್ಮನ್ನು ತಪ್ಪಾಗಿ ಸಿಲುಕಿಸಲಾಗಿದೆ. ತಮ್ಮ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ. ವಿಚಾರಣೆಯೂ ನಡೆಯದೆ, ಕಳೆದ ಐದು ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ. ತಮಗೆ ಜಾಮೀನು ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್ ಮುದಗಲ್ ಮತ್ತು ವೆಂಕಟೇಶ್ ನಾಯಕ್ ಟಿ. ಅವರಿದ್ದ ಪೀಠವು ವಿಚಾರಣೆ ನಡೆಸಿದೆ. ಅರ್ಜಿಯನ್ನು ತಿರಸ್ಕರಿಸುವಾಗ, “ಹಕ್ಕುಗಳ ನಿಜವಾದ ಮೂಲ ಕರ್ತವ್ಯ. ನಮ್ಮ ಕರ್ತವ್ಯಗಳನ್ನು ನಾವೆಲ್ಲರೂ ನಿರ್ವಹಿಸಿದ್ದರೆ ಮಾತ್ರ, ಹಕ್ಕುಗಳನ್ನು ಪಡೆಯಲು ಸಾಧ್ಯ” ಎಂಬ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಪೀಠವು ಉಲ್ಲೇಖಿಸಿದೆ.

”ಅರ್ಜಿದಾರರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿದ್ದಾರೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ, ಪೊಲೀಸರಿಗೆ ಗಾಯಗಳನ್ನುಂಟು ಮಾಡಿದ್ದಾರೆ, ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ದಾರೆ ಹಾಗೂ ಧಾರ್ಮಿಕ ಆಧಾರದ ಮೇಲೆ ಜನರ ನಡುವಿನ ಸಾಮರಸ್ಯವನ್ನು ಹಾಳುಮಾಡಿದ್ದಾರೆ ಎಂಬುದಕ್ಕೆ ಪ್ರಾಥಮಿಕವಾಗಿ ಪುರಾವೆಗಳಿವೆ. ಅರ್ಜಿದಾರರು ಸಂವಿಧಾನದ 21 ನೇ ವಿಧಿಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಹೇಳಿದೆ.

2020ರಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಪೋಸ್ಟ್‌ ವಿರುದ್ಧದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯ ಪ್ರತಿಭಟನೆಯು ಗಲಭೆಗೆ ತಿರುಗಿತ್ತು. ಗಲಭೆಯಲ್ಲಿ ಬೆಂಕಿ ಹಚ್ಚುವಿಕೆ, ವಿಧ್ವಂಸಕ ಕೃತ್ಯಗಳು ಹಾಗೂ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ 145ಕ್ಕೂ ಹೆಚ್ಚು ಜನರಿದ್ದ ಗುಂಪಿನಲ್ಲಿ ವಾಜಿದ್‌ ಕೂಡ ಪ್ರಮುಖ ಆರೋಪಿ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ವಾಜಿದ್ ಅವರು ಗಲಭೆ ನಡೆಸಿದ್ದ ‘ಭಯೋತ್ಪಾದಕ ಗ್ಯಾಂಗ್’ನ ಸದಸ್ಯರಾಗಿದ್ದಾರೆ. ಸಹ-ಆರೋಪಿಗಳೊಂದಿಗೆ ಪಿತೂರಿ ನಡೆಸಿ, ಗಲಭೆಗೆ ಜನರನ್ನು ಪ್ರೇರೇಪಿಸಿದ್ದಾರೆ. ಪೊಲೀಸ್ ಠಾಣೆಯನ್ನು ಸುಟ್ಟುಹಾಕುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಲೇಖನ ಓದಿದ್ದೀರಾ?: ‘ವಿಕಾಸ್ ಭಾರತ್ ಶಿಕ್ಷಾ ಅಧಿಷ್ಠಾನ’ ಮಸೂದೆ: ಕೇಂದ್ರದಿಂದ ಉನ್ನತ ಶಿಕ್ಷಣದ ಅತಿಕ್ರಮಣ; ಮಸೂದೆ ಹೇಳುವುದೇನು?

ವಾಜಿದ್ ಮತ್ತು ಇತರ 145 ಮಂದಿ ವಿರುದ್ಧ ಯುಎಪಿಎ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 436 (ಬೆಂಕಿ ಅಥವಾ ಸ್ಫೋಟಕ ವಸ್ತು ಬಳಸಿ ದುಷ್ಕೃತ್ಯ), 353 (ಸರ್ಕಾರಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಲು ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಹಾಗೂ ಕರ್ನಾಟಕ ಆಸ್ತಿ ವಿನಾಶ ಮತ್ತು ನಷ್ಟ ತಡೆ ಕಾಯ್ದೆ-1981 (ಕೆಪಿಡಿಎಲ್‌ಪಿ) ನಿಬಂಧನೆಗಳ ಅಡಿಯಲ್ಲಿ ಪ್ರಕರಣದ ದಾಖಲಿಸಿ, 2020ರಲ್ಲಿ ಬಂಧಿಸಲಾಗಿತ್ತು.

5 ವರ್ಷಗಳಿಂದ ಜೈಲಿನಲ್ಲಿರುವ ವಾಜಿದ್, ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ವಾಜಿದ್ ಅವರು ವಿಚಾರಣಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ತಮ್ಮನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ವಾದಿಸಿ ಜಾಮೀನು ಕೋರಿದ್ದರು. ಆದರೆ, ಈ ವರ್ಷದ ಆರಂಭದಲ್ಲಿ, ವಿಚಾರಣಾ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ, ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್‌ ಕೂಡ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...