ಬೆಂಗಳೂರು | ಮಳೆಯಿಂದ 300 ಕಿ.ಮೀ. ರಸ್ತೆಗಳಿಗೆ ಹಾನಿ; ಬಲಿಗಾಗಿ ಬಾಯ್ತೆರೆದಿವೆ ರಸ್ತೆಗುಂಡಿಗಳು

Date:

Advertisements

ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ. ಮಳೆಯಿಂದಾಗಿ ಮರ ಬಿದ್ದು ಸಾವನ್ನಪ್ಪಿದವರ ಕುಟುಂಬಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಿಹಾರ ನೀಡಿದೆ ಎಂದು ಹೇಳಿದ್ದಾರೆ.

ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವುದನ್ನು ತಡೆಗಟ್ಟುವ ಉದ್ದೇಶದಿಂದ ‘ಮಳೆನೀರು ಚರಂಡಿ’ಗಳಿಗೆ ತಡೆಗೋಡೆಗಳನ್ನು ನಿರ್ಮಿಸಲು ಮತ್ತು ಇತರ ಅಗತ್ಯ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿ 218 ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಿದೆ. ಜುಲೈ ಅಂತ್ಯದ ವೇಳೆಗೆ 169 ಸ್ಥಳಗಳಲ್ಲಿ ಕೆಲವು ಅಗತ್ಯ ಕೆಲಸಗಳನ್ನು ಮುಗಿಸಿದೆ. ಉಳಿದ 49 ಸ್ಥಳಗಳನ್ನು ಸರಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

Advertisements

ಸರ್ಕಾರದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಸುಮಾರು 150 ಕಿ.ಮೀ. ರಸ್ತೆಗಳು ಹಾನಿಗೊಳಗಾಗಿವೆ. ಆದಾಗ್ಯೂ, ಮನೆಗಳಿಗೆ ನೀರು ನುಗ್ಗಿದ ಘಟನೆಗಳು ಬೆಂಗಳೂರು ದಕ್ಷಿಣ ಮತ್ತು ಪೂರ್ವ ವಲಯದಿಂದ ಹೆಚ್ಚಾಗಿ ಸಂಭವಿಸಿವೆ.

ಹಾನಿಗೊಳಗಾಗಿರುವ ರಸ್ತೆಗಳು ಮತ್ತು ರಸ್ತೆಗುಂಡಿಗಳ ಬಗ್ಗೆ ಪ್ರಯಾಣಿಕರು ಕಳವಳ ವ್ಯಕ್ತಪಡಿಸಿದ್ದಾರೆ. “ಬೆಂಗಳೂರಿನಲ್ಲಿ ಗುಂಡಿಗಳಿಲ್ಲದ ಒಂದೇ ಒಂದು ರಸ್ತೆಯೂ ಇಲ್ಲ. ಪ್ರತಿದಿನ, ವಿಶೇಷವಾಗಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವುದು ಕಷ್ಟಕರವಾಗಿದೆ. ಇಂತಹ ಕಳಪೆ ರಸ್ತೆಗಳಿಂದಾಗಿ ನಮ್ಮಲ್ಲಿ ಅನೇಕರು ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯಲು ಹೆದರುತ್ತೇವೆ” ಎಂದು ಮಲ್ಲೇಶ್ವರಂ ಮತ್ತು ದೊಮ್ಮಲೂರು ನಡುವೆ ಪ್ರತಿದಿನ ಪ್ರಯಾಣಿಸುವ ಕಾವ್ಯಾ ಕೆ ಅವರು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ.

ನಗರದಲ್ಲಿ ಭಾರೀ ಮಳೆ ಸುರಿಯುವುದಕ್ಕೂ (ಮಳೆಗಾಲ ಆರಂಭವಾಗುವುದಕ್ಕೂ) ಮೊದಲು ಮುನ್ನೆಚ್ಚರಿಕೆ ವಹಿಸುವಂತೆ ಹಲವರು ಬಿಬಿಎಂಪಿಯನ್ನು ಒತ್ತಾಯಿಸಿದರು. “ಕಳಪೆ ರಸ್ತೆಗಳು ಮತ್ತು ರಸ್ತೆಗುಂಡಿಗಳು ಜನರ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿಲ್ಲವೇ? ಮಳೆಯಿಂದ ಹಾಳಾಗದ ರೀತಿಯಲ್ಲಿ ದೀರ್ಘಾವಧಿಗೆ ಬಾಳಿಕೆ ಬರುವಂತೆ ರಸ್ತೆಗಳನ್ನು ನಿರ್ಮಿಸಲು ಬಿಬಿಎಂಪಿ ಕ್ರಮ ಮತ್ತು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು” ಎಂದು ತಂತ್ರಜ್ಞ ಸುಮಂತ್ ಎಂ ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ಆದಾಗ್ಯೂ, ಹಿರಿಯ ಬಿಬಿಎಂಪಿ ಅಧಿಕಾರಿಗಳು ಹಾನಿಗೊಳಗಾದ ರಸ್ತೆಗಳನ್ನು ದುರಸ್ತಿ ಮಾಡುತ್ತಿದ್ದೇವೆ. ಯಾವುದೇ ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಲು ಬೆಂಗಳೂರು ಸಂಚಾರ ಪೊಲೀಸರ ಸಹಕಾರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

“ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ. ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆದಾಗ್ಯೂ, ಮಳೆಗಾಲದಲ್ಲಿ ನಾವು ಯಾವುದೇ ಪ್ರಮುಖ ಕೆಲಸವನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಸಮಸ್ಯೆಗಳನ್ನು ತಕ್ಷಣ ಗುರುತಿಸಲು ಮತ್ತು ಸರಿಪಡಿಸಲು ನಾವು ಸಂಚಾರ ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದೇವೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್‌’ ವರದಿಯಲ್ಲಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X