ಬೆಂಗಳೂರು | ಪಿಯುಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ 450 ಉದ್ಯೋಗಾವಕಾಶ

Date:

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಉದ್ಯೋಗಾವಕಾಶ ಕಲ್ಪಿಸಿದೆ. ಇಲಾಖೆಯಲ್ಲಿನ ಖಾಲಿ ಇರುವ 450 ಬೀಟ್ ಫಾರೆಸ್ಟರ್ (ಗಸ್ತು ಅರಣ್ಯ ಪಾಲಕ) ಗ್ರೂಪ್‌-ಸಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 2026ರ ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 2ಎ, 2ಬಿ, 3ಎ ಮತ್ತು 3ಬಿ ವರ್ಗದವರಿಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋಮಿತಿ ವಿನಾಯಿತಿ ಅನ್ವಯಿಸುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37,500 ರೂ.ಗಳಿಂದ 76,100 ರೂ.ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು?

  • ಸಾಮಾನ್ಯ ವರ್ಗ ಹಾಗೂ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 750 ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕರು: 500 ರೂ.
  • ವಿಶೇಷ ಚೇತನ ಅಭ್ಯರ್ಥಿಗಳು: 250 ರೂ.

ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಅರ್ಜಿ ಶುಲ್ಕ ಪಾವತಿಸಲು ಡಿಸೆಂಬರ್ 23 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳ ಪಿಯುಸಿ ಅಂಕಗಳ ಆಧಾರದ ಮೇಲೆ ಪ್ರತಿ ಹುದ್ದೆಗೆ 20 ಅಭ್ಯರ್ಥಿಗಳಂತೆ ಮುಂದಿನ ಹಂತಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ದೈಹಿಕ ಮಾನದಂಡ, ದೈಹಿಕ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಸ್ತುನಿಷ್ಠ ಮಾದರಿಯ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.

ಲಿಖಿತ ಪರೀಕ್ಷೆಯಲ್ಲಿ ಗಣಿತಕ್ಕೆ 40 ಅಂಕ ಹಾಗೂ ಸಾಮಾನ್ಯ ಜ್ಞಾನಕ್ಕೆ 60 ಅಂಕ ನಿಗದಿಪಡಿಸಲಾಗಿದೆ. ತಪ್ಪು ಉತ್ತರಕ್ಕೆ 0.25 ಅಂಕ ಕಡಿತವಿರುತ್ತದೆ. ಅಂತಿಮ ಮೆರಿಟ್ ಪಟ್ಟಿಯಲ್ಲಿ ಪಿಯುಸಿ ಅಂಕಗಳಿಗೆ ಶೇ.50 ಹಾಗೂ ಲಿಖಿತ ಪರೀಕ್ಷೆಯ ಅಂಕಗಳಿಗೆ ಶೇ.50ರಷ್ಟು ಪ್ರಾಮುಖ್ಯತೆ ನೀಡಲಾಗುತ್ತದೆ.

ಒಟ್ಟು 450 ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ (RPC) ಅಡಿಯಲ್ಲಿ 355 ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ 95 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 413 ನಿಯಮಿತ ಹಾಗೂ 37 ಹಿಂಬಾಕಿ ಹುದ್ದೆಗಳಾಗಿವೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಾವು ಅರ್ಜಿ ಸಲ್ಲಿಸುತ್ತಿರುವ ವೃಂದ ಮತ್ತು ಜಿಲ್ಲೆ/ವೃತ್ತದ ಹುದ್ದೆಗಳ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಅರ್ಜಿ ಸಲ್ಲಿಸುವ ವೆಬ್‌ಸೈಟ್‌ಗಳು: ಅರಣ್ಯ ಇಲಾಖೆ: https://aranya.gov.in⁠ ಕರ್ನಾಟಕ ಪರೀಕ್ಷಾ ಪ್ರಾಧಿಕಾರ: https://cetonline.karnataka.gov.in/kea/⁠

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಅಭ್ಯರ್ಥಿಗಳು ಅರಣ್ಯ ಇಲಾಖೆಯ ನೇಮಕಾತಿ ವಿಭಾಗದಲ್ಲಿ ಪ್ರಕಟಿಸಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು, ಅರ್ಹತೆ ಖಚಿತಪಡಿಸಿಕೊಂಡ ನಂತರವೇ ಅರ್ಜಿ ಸಲ್ಲಿಸಬೇಕು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆಹಾರ ಒದಗಿಸಬೇಕು: ಡಾ. ಎಚ್.ಕೃಷ್ಣ

"ದೇಶದ ಪ್ರತಿಯೊಬ್ಬ ನಾಗರೀಕನಿಗೂ ಗೌರವಯುತವಾಗಿ ಬದುಕಲು ಗುಣಮಟ್ಟದ ಮತ್ತು ಪೌಷ್ಟಿಕಾಂಶಯುಕ್ತ ಆಹಾರ...

ಶಿರಸಿ | ಬೇಡ್ತಿ–ವರದಾ ಜೋಡಣೆ ಯೋಜನೆ: ಡ್ರೋನ್ ಸರ್ವೆ ಆರಂಭ

ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ...

ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜಕೀಯ ಪಕ್ಷಗಳು ಸಹಕರಿಸಿ: ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ...