ರಾಜ್ಯದಲ್ಲಿ 456 ರೈತರ ಆತ್ಮಹತ್ಯೆ; 354 ಪ್ರಕರಣಗಳಿಗಷ್ಟೇ ಪರಿಹಾರ

Date:

ಈ ವರ್ಷ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಬೆಳೆ ಇಳುವರಿ ಬಾರದೆ ರೈತರು ಕಂಗಾಲಾಗಿದ್ದಾರೆ. ಹಲವರು ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟದಲ್ಲಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಈ ನಡುವೆ, ಸಾಲಬಾಧೆಯಿಂದ 2023ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಒಟ್ಟು 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಕಳೆದ ಏಳು ತಿಂಗಳಲ್ಲಿ ದಾಖಲಾದ ಈ 456 ರೈತರ ಆತ್ಮಹತ್ಯೆ ಪ್ರಕರಣಗಳ ಪೈಕಿ 354 ಪ್ರಕರಣಗಳು ಪರಿಹಾರಕ್ಕೆ ಅರ್ಹವಾಗಿವೆ ಎಂದು ಸರ್ಕಾರ ಹೇಳಿರುವುದಾಗಿ ತಿಳಿದುಬಂದಿದೆ. ಅರ್ಹ ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಮತ್ತು ಮಾಸಿಕ 2,000 ರೂ. ಪಿಂಚಣಿ ನೀಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆತ್ಮಹತ್ಯೆ ಮಾಡಿಕೊಂಡ ರೈತರ ಪೈಕಿ 259 ರೈತರು ಉತ್ತರ ಕರ್ನಾಟಕದವರಾಗಿದ್ದಾರೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ 61 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ಆತ್ಮಹತ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಉಳಿದಂತೆ ಬೆಳಗಾವಿ ಜಿಲ್ಲೆಯಲ್ಲಿ 56 ಮತ್ತು ಚಿಕ್ಕಮಗಳೂರಿನಲ್ಲಿ 49 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರದ ಸ್ಥಾನದಲ್ಲಿವೆ.

ಕಳೆದ ಆರ್ಥಿಕ ವರ್ಷದಲ್ಲಿ (2022ರ ಏಪ್ರಿಲ್‌ನಿಂದ 2023 ಮಾರ್ಚ್‌ವರೆಗೆ) 968 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಲ್ಲಿ, 849 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ವರದಿಯಾಗಿದೆ.

ಈ ವರ್ಷ ಬರಗಾಲದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹೆಚ್ಚಿನವರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಬ್ಯಾಂಕ್‌ಗಳಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಈ ನಡುವೆ, ಬ್ಯಾಂಕ್‌ ಸಾಲಗಳಲ್ಲಿ ಅಸಲನ್ನು ಕಟ್ಟುವ ರೈತರಿಗೆ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...