6 ವರ್ಷಗಳಲ್ಲಿ 50,000 ಸೈಬರ್ ಪ್ರಕರಣಗಳು ದಾಖಲು; ಕೇವಲ 23% ಮಾತ್ರ ಬಗೆಹರಿದಿವೆ

Date:

  • ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ
  • ಸೈಬರ್ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸ

ಬೆಂಗಳೂರಿನಲ್ಲಿ 2017ರಿಂದ ಮೇ 31ರವರೆಗೆ 50 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶೇ.23ರಷ್ಟು ಪ್ರಕರಣಗಳು ಮಾತ್ರ ಬಗೆಹರಿದಿದ್ದು, 29 ಮಂದಿಗಷ್ಟೇ ಶಿಕ್ಷೆಯಾಗಿದೆ.

- Advertisement -

ಸೈಬರ್ ಅಪರಾಧಗಳ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಉತ್ತರ ನೀಡಿದ್ದು, ಅಂಕಿಅಂಶಗಳ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ಸುಮಾರು ಆರೂವರೆ ವರ್ಷಗಳಲ್ಲಿ ದಾಖಲಾದ 50,027 ಸೈಬರ್ ಅಪರಾಧಗಳಲ್ಲಿ 2019ರಲ್ಲಿ ಅತಿ ಹೆಚ್ಚು (10,553) ಪ್ರಕರಣಗಳು ಮತ್ತು 2017ರಲ್ಲಿ ಕಡಿಮೆ (2,742) ಪ್ರಕರಣಗಳು ದಾಖಲಾಗಿವೆ. 2022ರಲ್ಲಿ 9,940 ಪ್ರಕರಣಗಳು ದಾಖಲಾಗಿದ್ದರೆ, 2023ರ ಮೊದಲ ಐದು ತಿಂಗಳಲ್ಲಿ 6,226 ಪ್ರಕರಣಗಳು ವರದಿಯಾಗಿವೆ. ಈ ವರ್ಷ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

“ಇದೂವರೆಗೂ ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಡೇಟಾದ ಪ್ರಕಾರ, 41% ಪ್ರಕರಣಗಳು (20,662) ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಮತ್ತು ಆನ್‌ಲೈನ್‌ನಲ್ಲಿ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡುವುದಕ್ಕೆ ಸಂಬಂಧಿಸಿವೆ. 18% ಪ್ರಕರಣಗಳು (9,198 ಪ್ರಕರಣಗಳು) ಮುಂಗಡ ಶುಲ್ಕ ಪಾವತಿ ವಂಚನೆ ಹಾಗೂ 10% ಪ್ರಕರಣಗಳು (5,012) ಕಾರ್ಡ್ ಸ್ಕಿಮ್ಮಿಂಗ್ (ಕಾರ್ಡ್ ಡೇಟಾ ಕದಿಯುವುದು) ವಂಚನೆಗೆ ಸಂಬಂಧಿಸಿವೆ” ಎಂದು ಅವರು ವಿವರಿಸಿದ್ದಾರೆ.

“ಮುಂಗಡ ಶುಲ್ಕ/ಉಡುಗೊರೆ ವಂಚನೆಗಳಲ್ಲಿ ಆನ್‌ಲೈನ್ ವಂಚಕರು ತಮಗೆ ಉಡುಗೊರೆಗಳನ್ನು ಕಳುಹಿಸಲಾಗಿದೆ. ಅವುಗಳನ್ನು ನೀವು ಪಡೆದುಕೊಳ್ಳಲು ನಾನಾ ಶುಲ್ಕಗಳನ್ನು ಪಾವತಿಸಬೇಕೆಂದು ಹೇಳಿ ಸಂತ್ರಸ್ತರಿಂದ ಹಣವನ್ನು ಪಡೆದುಕೊಳ್ಳುತ್ತಾರೆ. ಆದರೆ, ಯಾವುದೇ ಉಡುಗೊರೆಗಳು ಸಂತ್ರಸ್ತರನ್ನು ತಲುಪುವುದಿಲ್ಲ” ಎಂದಿದ್ದಾರೆ.

“ಸೈಬರ್ ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸವಾಗಿದೆ. ವಂಚಕರು ಪ್ರತಿದಿನ ಹೊಸ ತಂತ್ರಗಳನ್ನು ಬಳಸಿ, ಜನರನ್ನು ವಂಚಿಸುತ್ತಿದ್ದಾರೆ. ಹೊಸ ರೀತಿಯ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು” ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ನಾವು ನಿರಂತರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದೇವೆ. ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ಆದರೂ, ಜನರು ವಂಚನೆಗೆ ಬಲಿಯಾಗುತ್ತಿದ್ದಾರೆ. ಜಾಗೃತಿ ಕಾರ್ಯಕ್ರಮಗಳ ಭಾಗವಾಗಿ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

“ಪೊಲೀಸರು ಕೂಡ ವಂಚಕರ ಜಾಡು ಹಿಡಿಯಲು ನಾನಾ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಸೈಬರ್ ಅಪರಾಧ ಪ್ರಕರಣಗಳನ್ನು ಪರಿಹರಿಸಲು ಪೊಲೀಸ್ ಸಿಬ್ಬಂದಿಗೆ ನಿಯಮಿತವಾಗಿ ಕಾರ್ಯಾಗಾರಗಳನ್ನು ನಡೆಸುತ್ತಿದ್ದೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...