ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921 ಎಲೆಕ್ಟ್ರಿಕಲ್ ಬಸ್: ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟ್ರಿಕಲ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

- Advertisement -

ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದುವರೆಗೆ ಸ್ಮಾರ್ಟ್ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟ್ರಿಕಲ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಟಿಸಿಯಿಂದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ/ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕಲ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ನೀಡಿದೆ ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಸ್ತ್ರೀ ಶಕ್ತಿ ಯೋಜನೆ ಜಾರಿಯ ಬಗ್ಗೆ ಕೆ.ಎಸ್.ನವೀನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಕ್ತಿ ಯೋಜನೆಯು ಜಾರಿಯಾದ ನಂತರ ರಾಜ್ಯದ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯ ನಂತರ ಪ್ರತಿದಿನದ ಸರಾಸರಿಯ ಆದಾಯವು 2023-24ನೇ ಸಾಲಿನಲ್ಲಿ ಕ.ರಾ.ರ.ಸಾರಿಗೆ ನಿಗಮದಲ್ಲಿ 12.57 ಕೋಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 5.39 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ.ನಷ್ಟು ಆಗಿರುತ್ತದೆ ಎಂದು ತಿಳಿಸಿದರು.

ಶಕ್ತಿ ಯೋಜನೆ ಜಾರಿಯ ನಂತರ 108 ಕೋಟಿಗೂ ಆಧಿಕ ಜನರು ಈ ಯೋಜನೆಯ ಪ್ರಯೋಜನ ಪಡೆದಿದ್ದು, ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಮತ್ತೀಗ ಹೊಸದಾಗಿ 5,500 ಹೊಸ ಬಸ್‌ಗಳ ಖರೀದಿಗೆ ಅನುಮತಿ ನೀಡಿದ್ದು, 9000 ಸಿಬ್ಬಂದಿಯ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಬಿಎ ಚುನಾವಣೆ: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ಮಹಾನಗರ ಪಾಲಿಕೆಗಳ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ದೀಪಾವಳಿ: ಬೆಂಗಳೂರಿನ ವಾಯು ಗುಣಮಟ್ಟ ಮಾಪನದಲ್ಲಿ ‘ಅಪೂರ್ಣ ದತ್ತಾಂಶ’ದ ದೋಷ

ನಗರದ ವಾಯುಮಾಲಿನ್ಯ ಮಟ್ಟವನ್ನು ಅಳೆಯಲು ಬೆಂಗಳೂರಿನಲ್ಲಿ 14 ನಿರಂತರ ವಾಯು ಗುಣಮಟ್ಟ...