ಬರೋಬ್ಬರಿ 100 ಬಾರಿ ಸಂಚಾರ ನಿಯಮ ಉಲ್ಲಂಘನೆ : ಡಾನ್ಸ್ ಕೊರಿಯೋಗ್ರಾಫರ್ ಬೈಕ್ ಪೊಲೀಸರ ವಶಕ್ಕೆ

Date:

ನೃತ್ಯ ಸಂಯೋಜಕರೊಬ್ಬರು (ಡಾನ್ಸ್ ಕೊರಿಯೋಗ್ರಾಫರ್) ಬರೋಬ್ಬರಿ 99 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನಿಗೆ 56,000 ರೂ. ದಂಡ ವಿಧಿಸಿದ್ದಾರೆ.

ಬೆಂಗಳೂರಿನ ಬಿಳೇಕಹಳ್ಳಿ ನಿವಾಸಿ, ನೃತ್ಯ ಸಂಯೋಜಕ ಹಸನ್ ರೆಹಮಾನ್ 100 ಬಾರಿ ನಿಮಯ ಉಲ್ಲಂಘಿಸಿರುವ ಮಹಾಶಯ. ಆತನ ಬೈಕ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ದಂಡ ಪಾವತಿಸಲು ಎರಡು ತಿಂಗಳ ಗಡುವು ನೀಡಿದ್ದಾರೆ. ಆ ಅವಧಿಯೊಳಗೆ ದಂಡ ಪಾವತಿಸಿ, ಬೈಕ್ ಅನ್ನು ಮರಳಿ ಪಡೆಯಬೇಕು. ಇಲ್ಲದಿದ್ದರೆ ಬೈಕ್ ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರೆಹಮಾನ್ ಬಿಟಿಎಂ ಲೇಔಟ್‌ನಲ್ಲಿ ಡಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಅವರು ಬನ್ನೇರುಘಟ್ಟ ರೆಸ್ತೆಯ ವೆಗಾ ಸಿಟಿ ವೃತ್ತದಲ್ಲಿ ರಸ್ತೆಯ ವಿರುದ್ಧ ಪಥದಲ್ಲಿ ಚಲಿಸುತ್ತಿದ್ದಾಗ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಆತನ ಬೈಕ್ ನಂಬರ್‌ನನ್ನು ಸಂಚಾರ ನಿಯಮ ಉಲ್ಲಂಘನೆ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿದ್ದು, ಆತ 99 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೂಡಲೇ, ಕಾರು ಚಾಲಕ ಬೈಕ್‌ನ ಫೋಟೋ ತೆಗೆದು, ನಿಯಮ ಉಲ್ಲಂಘನೆಯ ಪಟ್ಟಿ ಇರುವ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವಿಟರ್‌ನಲ್ಲಿ ಹಂಚಿಕೊಂಡು ಬೆಂಗಳೂರು ಸಂಚಾರ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಎಚ್ಚೆತ್ತ ಪೊಲೀಸರು, ಬೈಕ್ ಸವಾರ ರೆಹಮಾನ್ ಅವರನ್ನು ಪತ್ತೆ ಮಾಡಿ ಬೈಕ್ ವಶ ಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

“ರೆಹಮಾನ್ ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಿದ್ದೇವೆ. ದಂಡ ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡ ಪಾವತಿಸದಿದ್ದರೆ, ಅವರ ವಾಹನವನ್ನು ಹರಾಜು ಮಾಡಲಾಗುವುದು” ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ.

“ರೆಹಮಾನ್ 54 ಬಾರಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದಾರೆ. ನಂಬರ್ ಪ್ಲೇಟ್ ದೋಷಪೂರಿತ ಪ್ರಕರಣಗಳು 34 ಬಾರಿ ದಾಖಲಾಗಿವೆ. ವಾಹನ ಚಲಾಯಿಸುವಾಗ ಐದು ಬಾರಿ ಮೊಬೈಲ್ ಬಳಸಿದ್ದಾರೆ. ಒನ್‌ ವೇ, ನೋ ಎಂಟ್ರಿ, ನೋ ಪಾರ್ಕಿಂಗ್ ಟ್ರಿಪಲ್ ರೈಡಿಂಗ್ ಸೇರಿದಂತೆ ಇನ್ನೂ ಕೆಲವು ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ” ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎನ್‌ಸಿಪಿಇಡಿಪಿಯಿಂದ ಬೆಂಗಳೂರು- ಕಲಬುರಗಿ ವಿಶೇಷ ಚೇತನರ ಆರೋಗ್ಯ ಸ್ಥಿತಿಗತಿ ಕುರಿತ ಅಧ್ಯಯನ ವರದಿ ಬಿಡುಗಡೆ

ಕರ್ನಾಟಕದಲ್ಲಿನ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಗಳ ವಿಶೇಷ...

ಬೆಂಗಳೂರು | ಅಪರಿಚಿತ ವಾಹನ ಡಿಕ್ಕಿ: ಫ್ಲೈ ಓವರ್‌ನಿಂದ ಬಿದ್ದು ಯುವಕ ಸಾವು

ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸುತ್ತಿವೆ. ಇದೀಗ, ಅಪರಿಚಿತ ವಾಹನವೊಂದು...

ಲೋಕಸಭೆ ಚುನಾವಣೆ | ಏ.13ರಿಂದ ಅಂಚೆ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26 ಮತ್ತು ಮೇ 7ರಂದು ಮತದಾನ...

ಬೆಂಗಳೂರು | ಕಾಲೇಜು ಯುವತಿಯೊಂದಿಗೆ ಅನುಚಿತ ವರ್ತನೆ: ಪ್ರಕರಣ ದಾಖಲು

ಬೆಂಗಳೂರಿನ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ನಿಲ್ದಾಣವನ್ನು ಸಂಪರ್ಕಿಸುವ ಸ್ಕೈವಾಕ್‌ನಲ್ಲಿ ಕುಡಿದ ಮತ್ತಿನಲ್ಲಿದ್ದ...