ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯಪಾಲರ ಹೆಸರು ಮತ್ತು ಫೋಟೋ ಬಳಸಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ತನಿಖೆಗೆ ಇಳಿದ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ 19ನೇ ರಾಜ್ಯಪಾಲರು. ಇವರು ರಾಜ್ಯಸಭೆ ಸದಸ್ಯರಾಗಿದ್ದರು.