ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಭಾರೀ ತಿರುವು

Date:

  • ಅಗ್ನಿ ದುರಂತದ ರಾತ್ರಿ ಮುತ್ತಯ್ಯ ಯುಪಿಐ ಐಡಿಯಿಂದ ಹಣ ವರ್ಗಾವಣೆ
  • ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್

ಇತ್ತೀಚೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ನಿರ್ವಾಹಕರೊಬ್ಬರು ಸಜೀವ ದಹನವಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ವಾಹಕ ಮುತ್ತಯ್ಯ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸ್‌ ತನಿಖೆಯ ವೇಳೆ ಶಂಕೆ ವ್ಯಕ್ತವಾಗಿದೆ.

ಮಾರ್ಚ್‌ 9ರಂದು ಲಿಂಗಧೀರನಹಳ್ಳಿ ಡಿಪೋ ಬಳಿ ನಿಂತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಸ್‌ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಈ ಘಟನೆಯಲ್ಲಿ ನಿರ್ವಾಹಕ ಮುತ್ತಯ್ಯ ಸಜೀವ ದಹನವಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಪೋಲಿಸರು ತನಿಖೆ ಆರಂಭಿಸಿದ್ದು, ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಘಟನೆ ದಿನ ಮಧ್ಯರಾತ್ರಿ ಮುತ್ತಯ್ಯ ಒಂದು ಗಂಟೆಯವರೆಗೂ ಫೋನ್ ಸಂಭಾಷಣೆಯಲ್ಲಿದ್ದರು. ಬಳಿಕ ಚಾಲಕ ಪ್ರಕಾಶ್ ಅವರನ್ನು ಕೋಣೆಯಲ್ಲಿ ಮಲಗುವಂತೆ ತಿಳಿಸಿ, ಆ ದಿನದ ಕಲೆಕ್ಷನ್ ಹಣವನ್ನು ಅವರಿಗೆ ಕೊಟ್ಟಿದ್ದಾರೆ. ಚಾಲಕ ಹೋಗಿ ಮಲಗಿದ ನಂತರ ಮುತ್ತಯ್ಯ ಬಸ್ಸಿನಿಂದ ಹೊರ ಹೋಗಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರು ಮೃತ ಮುತ್ತಯ್ಯ ಅವರ ಮೊಬೈಲ್ ಹಾಗೂ ಯುಪಿಐ ಐಡಿ ಪರಿಶೀಲನೆ ನಡೆಸಿದ್ದು, ಅಗ್ನಿ ದುರಂತದ ರಾತ್ರಿ ಮುತ್ತಯ್ಯ ಯುಪಿಐ ಐಡಿಯಿಂದ ಕೊನೆಯದಾಗಿ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಅಗ್ನಿ ದುರಂತ ಸಂಭವಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಇರುವ ಪೆಟ್ರೋಲ್ ಬಂಕ್ ಖಾತೆಗೆ ₹700 ಹಣ ವರ್ಗಾವಣೆಯಾಗಿದೆ. ಈ ವರ್ಗಾವಣೆ ಮಾಡಲಾದ ಹಣದಿಂದ ಪೆಟ್ರೋಲ್, ಡಿಸೇಲ್ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಮುತ್ತಯ್ಯ ಅವರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಮೃತ ಮುತ್ತಯ್ಯ ಎರಡು ಲೀಟರ್ ಪೆಟ್ರೋಲ್, ಐದು ಲೀಟರ್ ಡಿಸೇಲ್ ತಂದು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಡರಹಳ್ಳಿ ಠಾಣಾ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎನ್ನುವ ಬಗ್ಗೆ ಕೆಲವು ಪೂರಕ ಅಂಶಗಳು ಪತ್ತೆಯಾಗಿವೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು...

ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಹೆಸರು ಬಾಯಿಬಿಟ್ಟ ಎಂಬ ದ್ವೇಷದಿಂದ...

ಬೆಂಗಳೂರು | ಸೆ.29 ರಂದು ಮೈಸೂರು ರಸ್ತೆ-ಕೆಂಗೇರಿ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಸೆ.29 ರಂದು ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ...

ಹೈಬ್ರಿಡ್‌ ಟಿಎವಿಆರ್ ವಿಧಾನದಿಂದ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬದಲಾವಣೆ; ದೇಶದಲ್ಲೇ ಮೊದಲು

ಹೃದಯದ ಮಹಾಪಧನಿಯ ಕವಾಟ ತಿರುಚಿಕೊಂಡು ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆಗೆ ವೈದ್ಯರು...