ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ

Date:

  • ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ತಿಳಿಸಿದ ವಿಶೇಷ ನ್ಯಾಯಾಲಯ
  • ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹25,000 ದಂಡ ವಿಧಿಸಿ ಬೆಂಗಳೂರಿನ 1ನೇ ಹೆಚ್ಚುವರಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಆಗಸ್ಟ್ ತಿಂಗಳಿನಲ್ಲಿ ಸಂತ್ರಸ್ತೆಯ ಮನೆಯಲ್ಲಿ ಕಾರ್ಪೆಂಟಿಂಗ್ ಕೆಲಸಕ್ಕಾಗಿ ಅಪರಾಧಿ ಪ್ರಬೀರ್ ಅದಕ್ ತೆರಳಿದ್ದನು. ಈ ವೇಳೆ, ಮಲಗುವ ಕೋಣೆಯಲ್ಲಿ ಪೆನ್‌ಸ್ಟ್ಯಾಂಡ್ ಅಳವಡಿಸಲು ಅಪ್ರಾಪ್ತೆಯ ಸಹಾಯ ಕೇಳಿದ್ದ. ಆಕೆ ಸ್ಟಾಂಡ್ಅನ್ನು ಹಿಡಿದುಕೊಂಡು ನಿಂತಿದ್ದಾಗ, ಆಕೆಯನ್ನು ಹಿಂದಿನಿಂದ ಅಪ್ಪಿ, ಖಾಸಗಿ ಭಾಗಗಳನ್ನು ಮುಟ್ಟಿ, ಲೈಂಗಿಕ ದೌರ್ಜನ್ಯ ಎಸಗಿ, ಕಾಮವಾಂಛೆ ತೀರಿಸಿಕೊಂಡಿದ್ದ ಎಂದು ಆರೋಪಿಸಲಾಗಿತ್ತು.

ಅದಕ್ ವಿರುದ್ಧ ಸಂತ್ರಸ್ತೆಯ ತಾಯಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಕಾಮುಕ ಅದಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎನ್ ರೂಪಾ ಅವರು ಅದಕ್‌ನನ್ನು ಅಪರಾಧಿ ಎಂದು ಘೋಷಿಸಿದ್ದರು. ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹25,000 ದಂಡ ವಿಧಿಸಿದ್ದಾರೆ. ಅಲ್ಲದೆ, ಸಂತ್ರಸ್ತೆಗೆ ₹50,000 ಪರಿಹಾರ ನೀಡುವಂತೆ ನಿರ್ದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಲು ಸಾಲು ರಜೆ; ಮೂರು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ಕೆಲಸ ಅರಸಿ ಬಂದು ನಗರದಲ್ಲಿರುವ...

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು...

ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಹೆಸರು ಬಾಯಿಬಿಟ್ಟ ಎಂಬ ದ್ವೇಷದಿಂದ...

ಬೆಂಗಳೂರು | ಸೆ.29 ರಂದು ಮೈಸೂರು ರಸ್ತೆ-ಕೆಂಗೇರಿ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಸೆ.29 ರಂದು ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ...