ಗೆದ್ದರೆ ಕಟಿಂಗ್‌ ಫ್ರೀ ಎಂದ ರಾಜಾಜಿನಗರದ ಪಕ್ಷೇತರ ಅಭ್ಯರ್ಥಿ

Date:

  • ಮತದಾರರ ಕೋರಿಕೆಯಂತೆ ಚುನಾವಣೆಗೆ ಸ್ಫರ್ಧಿಸಿದ್ದೇನೆಂದ ಎಂ ನರಸಿಂಹಲು
  • ಇಂದಿರಾ ಕ್ಯಾಂಟೀನ್ ಪಕ್ಕದ ಜಾಗದಲ್ಲಿ ಎಲ್ಲರಿಗೂ ₹5ಗೆ ಕಾಫಿ, ಟೀ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಕಾವೇರಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ತಿಳಿಯಲಿದೆ. ಮತದಾರರ ಓಲೈಕೆಗಾಗಿ ಅಭ್ಯರ್ಥಿಗಳು ತಮ್ಮದೇ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಾರೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತಮ್ಮ ಪ್ರಣಾಳಿಕೆಯಲ್ಲಿ ಮತದಾರರಿಗೆ ಉಚಿತವಾಗಿ ತಲೆ ಕೂದಲು ಕಟಿಂಗ್‌ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಎಂ ನರಸಿಂಹಲು ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ಮತದಾರರು ತಮಗೆ ಮತ ಹಾಕಬೇಕೆಂದು ಮನವಿ ಮಾಡಿದ್ದಾರೆ.

ರಾಜಾಜಿನಗರ ಮತದಾರರ ಕೋರಿಕೆಯ ಮೇರೆಗೆ ತಾವು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದೇನೆಂದು ಹೇಳಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಾವು ಈ ಚುನಾವಣೆಯಲ್ಲಿ ಗೆದ್ದು ಬಂದರೆ, ರಾಜಾಜಿನಗರದ ಹಿರಿಯ ನಾಗರಿಕರಿಗೆ, ಮಕ್ಕಳಿಗೆ, ಅಂಗವಿಕಲರಿಗೆ ಹಾಗೂ ಅನಾಥ ಮಕ್ಕಳಿಗೆ ಉಚಿತವಾಗಿ ತಲೆ ಕೂದಲು ಕಟಿಂಗ್‌ ಮಾಡಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೈಕ್‌ ವೀಲಿಂಗ್‌ ಹುಚ್ಚು; 17 ಬೈಕ್ ಕಳ್ಳತನ

ವಿಧಾನಸಬಾ ಕ್ಷೇತ್ರದ 7 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮದಡಿ ಮನೆಗೊಂದು ಗಿಡ ನೀಡಲಾಗುವುದು. ಇಂದಿರಾ ಕ್ಯಾಂಟೀನ್ ಪಕ್ಕದ ಜಾಗದಲ್ಲಿ ಎಲ್ಲರಿಗೂ ₹5 ಬೆಲೆಯಲ್ಲಿ ಕಾಫಿ, ಟೀ ನೀಡಲಾಗುವದು ಎಂದು ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.   

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...