ರಾಜಾಜಿನಗರ | ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಎಎಪಿ ದೂರು

Date:

  • ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಅನರ್ಹಕ್ಕೆ ಆಗ್ರಹ
  • ಜನಪ್ರತಿನಿಧಿಗಳ ಕಾಯಿದೆ 1951ರ ಉಲ್ಲಂಘನೆಯಾಗುತ್ತಿದೆ ಎಂದು ಎಎಪಿ ಆರೋಪ

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್‌ ನೇತೃತ್ವದ ನಿಯೋಗವು ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸತೀಶ್‌, “ರಾಜಾಜಿನಗರದಲ್ಲಿ ಚುನಾವಣಾ ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆ, ಭಾರೀ ಪ್ರಮಾಣದ ಹಣವು ಅಕ್ರಮ ವರ್ಗಾವಣೆಯಾಗುತ್ತಿದೆ. ಚುನಾವಣಾ ನೀತಿ ಸಂಹಿತೆ ಕಾಯಿದೆ 1961, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ, ಜನಪ್ರತಿನಿಧಿಗಳ ಕಾಯಿದೆ 1951 ಮುಂತಾದ ಅನೇಕ ಕಾನೂನು ಉಲ್ಲಂಘನೆಯಾಗುತ್ತಿದೆ. ಜಾರಿ ನಿರ್ದೇಶನಾಲಯವು ಶೀಘ್ರವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

“ರಾಜಾಜಿನಗರದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಉಪಮೇಯರ್‌ ರಂಗಣ್ಣ ರಘುವೀರ್‌, ಪದ್ಮರಾಜ್‌, ವಿಜಯಕುಮಾರ್‌, ಕೃಷ್ಣಮೂರ್ತಿ, ಯಶಸ್‌, ರವಿ, ಗಿಳಿ ವೆಂಕಟೇಶ್‌, ಮುನಿರಾಜ್‌, ಪಳನಿಕಾಂತ್‌, ರಾಜಣ್ಣ ವಿರುದ್ಧ ದೂರು ನೀಡಲಾಗಿದೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಜಂಟಿ ಮುಖ್ಯ ಚುನಾವಣಾಧಿಕಾರಿ ಮತ್ತು ರಾಜಾಜಿನಗರದ ಆರ್‌ಒಗೆ ದೂರು ಸಲ್ಲಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣರವರನ್ನು ಅನರ್ಹ ಮಾಡಬೇಕೆಂದು ಆಗ್ರಹಿಸಿದ್ದೇವೆ” ಎಂದು ಡಾ. ಸತೀಶ್‌ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...