ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಪರಿಷ್ಕರಣೆಗೆ ಎಎಪಿ ಒತ್ತಾಯ: ಗಡ್ಕರಿಗೆ ಪತ್ರ

Date:

Advertisements
  • ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚ
  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರೀ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ಲಘು ವಾಹನಕ್ಕೆ ಬರೋಬ್ಬರಿ ₹640 ಟೋಲ್ ಹಣ ಕಟ್ಟಿಸಿಕೊಳ್ಳುತ್ತಿದ್ದು, ಟೋಲ್ ಶುಲ್ಕ ಪರಿಷ್ಕರಿಸುವಂತೆ ಆಮ್ ಆದ್ಮಿ ಪಕ್ಷ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದಿದೆ.

ನಗರದ ಕುಮಾರ್‌ ಪಾರ್ಕ್ ಬಳಿಯ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಬೆಂಗಳೂರು-ಮೈಸೂರು ನಡುವಿನ ರಸ್ತೆ ನಿರ್ಮಾಣವನ್ನು ಸಂಸದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಎಕ್ಸ್‌ಪ್ರೆಸ್‌ ವೇ ಎಂದು ಹೇಳಿಕೊಂಡಿದ್ದರು. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೊಂದು ರಾಷ್ಟ್ರೀಯ ಹೆದ್ದಾರಿ ಎಂದು ಸ್ಪಷ್ಟಪಡಿಸಿದೆ. ಹೀಗಿರುವಾಗ ಎರಡೆರಡು ಕಡೆಗಳಲ್ಲಿ ಟೋಲ್ ಕೇಂದ್ರಗಳನ್ನು ನಿರ್ಮಿಸಿಕೊಂಡು ಜನಸಾಮಾನ್ಯರ ದುಡ್ಡನ್ನು ದೋಚುತ್ತಿರುವುದು ಏಕೆ?” ಎಂದು ಪ್ರಶ್ನಿಸಿದರು.

“ಒಂದು ಲಘು ವಾಹನವು ಈ ರಸ್ತೆಯ ಮೂಲಕ ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚ ತಗುಲುತ್ತಿದೆ. ಪ್ರತಿ ಲೀಟರ್ ಡೀಸೆಲ್‌ಗೆ ‘ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್’ ₹9 ಕಟ್ಟಬೇಕು. ಸುಮಾರು 20 ಲೀಟರ್ ಡೀಸೆಲ್ ಖರ್ಚಾದರೆ ಅಲ್ಲೇ ₹180 ಸುಂಕ ಕಟ್ಟಿದಂತಾಗುತ್ತದೆ. ಇನ್ನು ರಾಮನಗರದ ಕಣಮಿಣಿಕೆ ಬಳಿಯಿರುವ ಟೋಲ್ ಕೇಂದ್ರದಲ್ಲಿ ₹165, ಮಂಡ್ಯದ ಶ್ರೀರಂಗಪಟ್ಟಣ ಬಳಿಯ ಗಣಂಗೂರಿನಲ್ಲಿ ₹155 ಟೋಲ್ ಶುಲ್ಕ ಕಟ್ಟಬೇಕಿದೆ. ಒಂದು ರಾಷ್ಟ್ರೀಯ ಹೆದ್ದಾರಿಗೆ ಇಷ್ಟೊಂದು ತೆರಿಗೆ ಯಾಕೆ ಕಟ್ಟಬೇಕು?” ಎಂದು ಮೋಹನ್‌ ದಾಸರಿ ಕೇಳಿದರು.

Advertisements

ಹೆದ್ದಾರಿ ನಿರ್ಮಾಣದಲ್ಲಿ ಬೃಹತ್ ಭ್ರಷ್ಟಾಚಾರ: ಎಎಪಿ ಆರೋಪ

“ವಾಹನ ಖರೀದಿ ಸಮಯದಲ್ಲೇ ಸುಮಾರು ₹5 ಲಕ್ಷದ ವಾಹನಕ್ಕೆ ₹65,000 ರಸ್ತೆ ತೆರಿಗೆ ಎಂದು ಕಟ್ಟಲಾಗಿರುತ್ತದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಗೆ ಸೆಸ್ ಕಟ್ಟಲಾಗುತ್ತದೆ. ಇಷ್ಟೆಲ್ಲಾ ಕಟ್ಟಿದ ನಂತರ ಪುನಃ ಟೋಲ್ ರೂಪದಲ್ಲಿ ಸುಂಕ ಕಟ್ಟಬೇಕಿದೆ. ರಸ್ತೆಗಳಾದರೂ ಸುಧಾರಣೆಗೊಂಡಿವೆಯೇ? ರಸ್ತೆಗುಂಡಿಗಳು, ಅವೈಜ್ಞಾನಿಕ ಚರಂಡಿಗಳು, ಸರ್ವಿಸ್ ರಸ್ತೆಗಳೇ ಇಲ್ಲದಿರುವುದು ಹೀಗೆ ನೂರಾರು ಸಮಸ್ಯೆಗಳು ರಸ್ತೆಯುದ್ದಕ್ಕೂ ಬಿದ್ದಿವೆ. ಹಾಗಿದ್ದರೆ ಸುಂಕವೆಂದು ಸಂಗ್ರಹಿಸಲಾಗುತ್ತಿರುವ ಈ ದುಡ್ಡೆಲ್ಲ ಎಲ್ಲಿ ಹೋಗುತ್ತಿದೆ?” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

“ಬೆಂಗಳೂರು-ಮುಂಬೈ ಹೆದ್ದಾರಿಯಲ್ಲಿ ಅನಧಿಕೃತವಾಗಿ ₹76 ಕೋಟಿ ಸಂಗ್ರಹಿಸಲಾಗಿದೆ ಎಂದು ಸಿಎಜಿ ವರದಿ ಕೊಟ್ಟಿದೆ. ದ್ವಾರಕಾ ಎಕ್ಸ್‌ಪ್ರೆಸ್‌ ವೇ ಕುರಿತಾದ ಸಿಎಜಿ ವರದಿಯಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿ ಕಿ.ಮೀ.ಗೆ ನಿಗದಿಪಡಿಸಲಾಗಿದ್ದ ₹18 ಕೋಟಿ ಬದಲಿಗೆ ₹250 ಕೋಟಿ ವ್ಯಯಿಸಲಾಗಿದೆ ಎಂದಿದೆ. ಇವೆಲ್ಲವನ್ನೂ ಗಮನಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾರಿ ಪ್ರಮಾಣದ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆಯಿದೆ” ಎಂದು ದಾಸರಿ ಆರೋಪಿಸಿದರು.

ಈ ವೇಳೆ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಡಾ.ಸತೀಶ್ ಕುಮಾರ್ ಹಾಗೂ ಹಿರಿಯ ಮುಖಂಡ ಗುರುಮೂರ್ತಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X