ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ ಮರು ತನಿಖೆಗೆ ಎಎಪಿ ಆಗ್ರಹ

Date:

“ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲು ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಲಂಚ ಪ್ರಕರಣ ಪ್ರಮುಖ ಕಾರಣವಾಗಿದ್ದು, ಕ್ಷುಲ್ಲಕ ಲೋಪದಿಂದ ಅವರ ವಿರುದ್ಧದ ಪ್ರಕರಣ ರದ್ದಾಗಿದೆ. ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತಕ್ಕೆ ಮರು ತನಿಖೆಗೆ ನೀಡಬೇಕು” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.

- Advertisement -

ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, “ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಪರಮಾಪ್ತರಾಗಿದ್ದ ಕೆ. ಮಾಡಾಳು ವಿರೂಪಾಕ್ಷಪ್ಪ ಅವರು ಶಾಸಕರು ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿ ಇಡೀ ದೇಶದ ಗಮನ ಸೆಳೆದಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಈ ಘಟನೆ ಆನಂತರ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಪ್ರಮುಖ ಕಾರಣವಾಯಿತು” ಎಂದು ಜಗದೀಶ್ ವಿ. ಸದಂ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಸುಗಂಧ ದ್ರವ್ಯಕ್ಕೆ ಸಂಬಂಧಪಟ್ಟ ಕಚ್ಚಾ ವಸ್ತುಗಳನ್ನು ಮಾರಾಟ ಮಾಡಲು ಗುತ್ತಿಗೆ ನೀಡುವ ವಿಚಾರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಲಂಚ ಕೇಳಿದ್ದಾಗಿ ಶ್ರೇಯಸ್ ಕಶ್ಯಪ್ ಎನ್ನುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಾಡಾಳ್ ಅವರ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರು ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ₹40 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಲಾಗಿತ್ತು. ತದ ನಂತರ ಮಾಡಾಳ್ ವಿರೂಪಾಕ್ಷಪ್ಪನವರ ಮನೆ ಮೇಲೆ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ₹8 ಕೋಟಿ ಹಣ ಪತ್ತೆಯಾಗುತ್ತದೆ. ಆದರೆ, ಅಡಿಕೆ ಮಾರಿದ ಹಣ ಎಂದು ಅವರು ಸಮಜಾಯಿಷಿ ನೀಡಿದ್ದರು. ಕೊನೆಗೆ ಅವರಿಗೆ ಬಿಜೆಪಿ ಟಿಕೆಟ್ ಕೊಡದೆ, ಅವರ ಮಗ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಸೋತರು. ಇಷ್ಟೆಲ್ಲಾ ದೊಡ್ಡ ಹಗರಣ ಆದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ನಾವು ಕೂಡ ನಿರೀಕ್ಷೆ ಮಾಡಿದ್ದೆವು. ಆದರೆ, ಈ ಪ್ರಕರಣದಲ್ಲಿ ಸ್ಪೀಕರ್ ಪ್ರಾಸಿಕ್ಯೂಷನ್ ಅನುಮತಿ ಪಡೆದಿರಲಿಲ್ಲ ಎಂದು ಕಾರಣ ನೀಡಿ ಮೂರು ದಿನಗಳ ಹಿಂದೆ ಹೈಕೋರ್ಟ್ ಪ್ರಕರಣ ವಜಾ ಮಾಡಿದೆ” ಎಂದು ಜಗದೀಶ್ ವಿ. ಸದಂ ಹೇಳಿದರು.

“ಪ್ರಾಸಿಕ್ಯೂಷನ್ ಅನುಮತಿ ಪಡೆದು ಪ್ರಕರಣ ತನಿಖೆ ಮಾಡಬೇಕು ಎನ್ನುವ ಕನಿಷ್ಠ ಜ್ಞಾನ ಅಂದಿನ ಸರ್ಕಾರಕ್ಕೆ ಇರಲಿಲ್ಲವಾ? ಪ್ರಾಸಿಕ್ಯೂಷನ್ ಅನುಮತಿ ನೀಡದೇ ಯಾಕೆ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದೆ? ಇಷ್ಟೊಂದು ದೊಡ್ಡ ಪ್ರಕರಣ ವಜಾ ಆಗಿರುವುದು ನೀಚ ವ್ಯವಸ್ಥೆಗೆ ಹಿಡಿದ ಕೈಗನ್ನಡಿ” ಎಂದು ಜಗದೀಶ್ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದರು.

“ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಜೆಪಿ ವಿಪಕ್ಷವಾಗಿದೆ. ಎರಡೂ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ ಎಂದು ಮಾಧ್ಯಮಗಳೇ ವರದಿ ಮಾಡಿವೆ. ಈ ಪ್ರಕರಣ ಗಮನಿಸಿದರೆ ಅದು ನಿಜ ಅನಿಸುತ್ತದೆ. ಚುನಾವಣೆಗೆ ಮೊದಲು ಕಾಂಗ್ರೆಸ್ ಆಮ್ ಆದ್ಮಿ ಪಕ್ಷದ ಜೊತೆ ಹೋರಾಟ ಮಾಡಿತ್ತು. ಆದರೆ, ಇಂದು ಪ್ರಕರಣದ ತನಿಖೆಗೆ ಅನುಮತಿ ನೀಡದೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ಸ್ಪೀಕರ್ ಯು.ಟಿ. ಖಾದರ್ ಅವರು ಪ್ರಾಸಿಕ್ಯೂಷನ್ ಅನುಮತಿ ನೀಡಿ ಈ ಪ್ರಕರಣವನ್ನು ಮರು ತನಿಖೆಗೆ ಆದೇಶ ನೀಡಬೇಕು” ಎಂದು ಜಗದೀಶ್ ವಿ. ಸದಂ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೋವಿಡ್‌ ಶವ ಸಂಸ್ಕಾರಕ್ಕೆ 4 ಚಿತಾಗಾರ ಮೀಸಲಿಟ್ಟ ಬಿಬಿಎಂಪಿ

“ಕೆಎಎಸ್‌ ಅಧಿಕಾರಿಯಾಗಲೂ ಅರ್ಹತೆಯಿಲ್ಲದ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳು ಅವರು ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯಾಗಿದ್ದು ಹೇಗೆ? ತಂದೆಯ ಪ್ರಭಾವದಿಂದ ಉನ್ನತ ಹುದ್ದೆ ಪಡೆದಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರಶಾಂತ್‌ ಮಾಡಾಳು ಈ ಹುದ್ದೆ ಹೇಗೆ ಪಡೆದರು ಎಂಬ ಬಗ್ಗೆಯೂ ತನಿಖೆಯಾಗಬೇಕು” ಎಂದು ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ, ವಕೀಲರಾದ ಲೋಹಿತ್ ಕುಮಾರ್ ಮಾತನಾಡಿ, “ಚುನಾವಣೆ ಘೋಷಣೆಯಾದ ಬಳಿಕ ನಡೆದ ಅತಿ ದೊಡ್ಡ ಹಗರಣ ಇದು. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಬಂದರೂ ಇದರ ಬಗ್ಗೆ ಅಪ್ಪಿ ತಪ್ಪಿಯೂ ಮಾತನಾಡಲಿಲ್ಲ” ಎಂದರು.

“ಈ ಪ್ರಕರಣ ದಾಖಲಾದಾಗ ಪ್ರಭುಲಿಂಗ ನಾವದಗಿ ಅವರು ಸರ್ಕಾರದ ಪ್ರತಿನಿಧಿಯಾಗಿದ್ದರು. ಬಿಎಸ್ ಯಡಿಯೂರಪ್ಪನವರಿಗೂ ಅವರೇ ಅಡ್ವೋಕೇಟ್ ಆಗಿದ್ದರು. ಪ್ರಕರಣ ದಾಖಲಾದಾಗ ಮಾಡಾಳ್‌ ವಿರೂಪಾಕ್ಷಪ್ಪ ಅವರ ವಿರುದ್ಧ ವಾದ ಮಂಡಿಸಿದ್ದ ಇದೇ ವಕೀಲರು ಇಂದು ಆರೋಪಿ ಪರ ವಾದ ಮಂಡಿಸಿ ಗೆದ್ದಿರುವುದು ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕೈಗನ್ನಡಿಯಾಗಿದೆ” ಎಂದರು.

“ಕಾಂಗ್ರೆಸ್ ಸರ್ಕಾರ ಕೂಡ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬಿಜೆಪಿ ನಾಯಕರ ಮೇಲೆ ಹೆಚ್ಚಿನ ಭ್ರಷ್ಟಾಚಾರ ಪ್ರಕರಣಗಳಿವೆ. ಎರಡೂ ಪಕ್ಷದ ನಾಯಕರು ಕೂಡ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದರು. ಸ್ಪೀಕರ್ ಯುಟಿ ಖಾದರ್ ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಮರು ತನಿಖೆಗೆ ಆದೇಶ ನೀಡಬೇಕು” ಎಂದು ಒತ್ತಾಯಿಸಿದರು.

“ಎಲ್ಲ ಆಧಾರಗಳು ಇದ್ದರೂ, ₹8 ಕೋಟಿ ಹಣ ಪತ್ತೆಯಾಗಿದ್ದರೂ ಕೂಡ ಈ ಪ್ರಕರಣವನ್ನು ಬಿಜೆಪಿಯವರು ಮುಚ್ಚಿ ಹಾಕಿದ್ದಾರೆ. ಇದನ್ನು ಜನ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಬಿಜೆಪಿಗೆ ಪಾಠ ಕಲಿಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...