ಮಣಿಪುರ ಯುವತಿಯರ ಬೆತ್ತಲೆ ಮೆರವಣಿಗೆ ವಿರೋಧಿಸಿ ಆಪ್ ಪ್ರತಿಭಟನೆ

Date:

  • ಬೆತ್ತಲೆ ಪರೇಡ್ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣವು ತಡವಾಗಿ ಬೆಳಕಿಗೆ ಬಂದಿರುವುದು ದುರಂತ
  • ಮಣಿಪುರದ ಮುಖ್ಯಮಂತ್ರಿಗಳ ನೇರ ಪಾತ್ರವಿರುವುದು ಸಹ ಈ ಪ್ರಕರಣದಿಂದ ಸಾಬೀತಾಗುತ್ತದೆ

ಮಣಿಪುರದಲ್ಲಿ ನಡೆದಿರುವ ಯುವತಿಯರ ಬೆತ್ತಲೆ ಮೆರವಣಿಗೆಯ ಅಮಾನವೀಯ ಕೃತ್ಯವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಮೊಂಬತ್ತಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿ, ತೀವ್ರ ಖಂಡನೆ ವ್ಯಕ್ತಪಡಿಸಿದರು.

- Advertisement -

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಕಳೆದ ಕೆಲವು ತಿಂಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸೆ, ದೌರ್ಜನ್ಯ ಹಾಗೂ ದಬ್ಬಾಳಿಕೆ ಪ್ರಕರಣಗಳನ್ನು ಬಿಜೆಪಿಯ ನೇತೃತ್ವದ ಕೇಂದ್ರ ಸರ್ಕಾರ ಪೂರ್ವ ಯೋಚಿತವಾಗಿಯೇ ನಡೆಸುತ್ತಿರುವುದು ತೀರ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಯುವತಿಯರ ಬೆತ್ತಲೆ ಮೆರವಣಿಗೆ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣವು ತಡವಾಗಿ ಬೆಳಕಿಗೆ ಬಂದಿರುವುದು ದುರಂತ. ನಾಗರಿಕ ಸಮಾಜವೇ ಬೀಳಿಸುವಂತಹ ಇಂತಹ ಆರೋಪಿಗಳನ್ನು ಬಂಧಿಸಿ ಶೀಘ್ರ ಕಠಿಣ ಶಿಕ್ಷೆಗೆ ಒಳಪಡಿಸದಿರುವುದು ಈ ದೇಶದ ದುರಂತ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ

“ಈ ಪ್ರಕರಣ ನಡೆದು ಎರಡು ತಿಂಗಳಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿಯಾದ ನಂತರವೂ ಆರೋಪಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದೆ ಇರುವುದನ್ನು ನೋಡಿದರೆ ಬಿಜೆಪಿ ಸರ್ಕಾರವು ಮಹಿಳೆಯರ ವಿರೋಧಿ ಹಾಗೂ ಅತ್ಯಾಚಾರಿಗಳ ಪರ ಇರುವುದು ಸಾಬೀತಾಗುತ್ತದೆ. ಘಟನೆಯಲ್ಲಿ ಮಣಿಪುರದ ಮುಖ್ಯಮಂತ್ರಿಗಳ ನೇರ ಪಾತ್ರವಿರುವುದು ಸಹ ಈ ಪ್ರಕರಣದಿಂದ ಸಾಬೀತಾಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೇಶದ ಜನ ತಕ್ಕ ಪಾಠವನ್ನು ಕಲಿಸಿತ್ತಾರೆ” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ, ಬೆಂಗಳೂರು ನಗರ ಅಧ್ಯಕ್ಷ  ಡಾ. ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ,  ದರ್ಶನ್ ಜೈನ್, ಉಷಾ ಮೋಹನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...