ಆಟೋಗಳಿಗೆ ಸೂಕ್ತ ಪರ್ಮಿಟ್ ನೀಡದೆ ಸರ್ಕಾರವೇ ದಂಡವನ್ನು ವಿಧಿಸುತ್ತಿರುವುದು ಸರಿಯಲ್ಲ: ಎಎಪಿ

Date:

ಕೋವಿಡ್‌ ಅವಧಿಯ 2019 / 2020 ರ ಎರಡು ವರ್ಷಗಳಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಸಾವು ನೋವುಗಳಿಂದ ತತ್ತರಿಸಿದ ಸಂದರ್ಭದಲ್ಲಿ ಸಂಚಾರಕ್ಕೆ ಬಿಡುಗಡೆಯಾದ ಸಾವಿರಾರು ಬಿಎಸ್ 6 ( BS 6 ) ಆಟೋಗಳಿಗೆ ರಾಜ್ಯ ಸಾರಿಗೆ ಇಲಾಖೆಯವರು ಇದುವರೆವಿಗೂ ಪರ್ಮಿಟ್‌ಗಳನ್ನು ನೀಡಿಲ್ಲ. ಆದರೆ ಈಗ ಏಕಾಏಕಿ ಆಟೋಗಳಿಗೆ ಎಲ್ಲೆಂದರಲ್ಲಿ ದಂಡವನ್ನು ವಿಧಿಸಿ ಜಪ್ತಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಮ್ ಆದ್ಮಿ ಪಕ್ಷವು ಇಂದು ಬೆಂಗಳೂರಿನಲ್ಲಿ ಕರೆದಿದ್ದ ಸಾರಿಗೆ ಇಲಾಖೆಯ ಸಭೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪ್ರಶ್ನಿಸಿದೆ.

- Advertisement -

ಸಭೆಯ ನಂತರ ರಾಜ್ಯ ಆಟೋ ಘಟಕದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ “ಏಕಾಏಕಿ ಬಿಎಸ್ 7 ( BS 7) ಆಟೋಗಳನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಿದ್ದೆ ಇದಕ್ಕೆ ಪ್ರಮುಖ ಕಾರಣ. ಕೊರೋನಾ ಸಂದರ್ಭದಲ್ಲಿ ಯಾವುದೇ ಸಾಲ ಸೌಲಭ್ಯಗಳು ಸಿಗದಿದ್ದ ದುಸ್ಥಿತಿಯ ಕಾಲದಲ್ಲಿ ತಮ್ಮ ಜೀವನವನ್ನು ನಡೆಸಲು ಬಿಎಸ್ 6 ಆಟೋಗಳನ್ನು ಖರೀದಿಸಿದ್ದ ಬೆಂಗಳೂರಿನ ಸಾವಿರಾರು ಆಟೋ ಚಾಲಕರುಗಳು ಸಾರಿಗೆ ಇಲಾಖೆಯಿಂದ ಕೇವಲ ನೋಂದಣಿ ಮಾತ್ರ ಮಾಡಿಕೊಂಡು ಪರ್ಮಿಟ್ ಭಾಗ್ಯವಿಲ್ಲದೆ ಇದುವರೆಗೂ ಸಾರಿಗೆ ಕಚೇರಿಗಳಿಗೆ ಅಲೆಯುತ್ತಿದ್ದಾರೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ಆದರೆ ಈಗ ಏಕಾಏಕಿ ತಮ್ಮ ಸಾರಿಗೆ ಇಲಾಖೆಯ ಅಧಿಕಾರಿಗಳು ರಸ್ತೆಗಳಲ್ಲಿ ಅಲ್ಲಲ್ಲಿ ಪರ್ಮಿಟ್ ಇಲ್ಲದ ಕಾರಣ ಬಿಎಸ್ 6 ಆಟೋಗಳನ್ನು ಜಪ್ತಿ ಮಾಡಿ ದುಬಾರಿ ದಂಡಗಳನ್ನು ವಿಧಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಪ್ರಶ್ನೆಯಾಗಿದೆ” ಎಂದು ಆಯುಬ್ ಖಾನ್ ಅವಲತ್ತುಕೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

“ಈ ಕೂಡಲೇ ಬಿಎಸ್ 6 ಆಟೋಗಳಿಗೆ ಪರ್ಮಿಟ್ ಭಾಗ್ಯವನ್ನು ನೀಡಿ ಜಪ್ತಿ ಹಾಗೂ ಇನ್ನಿತರ ಕಾನೂನು ಕ್ರಮಗಳಿಂದ ಮುಕ್ತಗೊಳಿಸಬೇಕು. ಇದಲ್ಲದೆ ಬಡ ಆಟೋ ಚಾಲಕರುಗಳು ತಮ್ಮ ಯೂನಿಫಾರಂ, ಎಮಿಷನ್ ಸರ್ಟಿಫಿಕೇಟ್, ವಿಮೆಗಳನ್ನು ಮಾಡಿಸಿಕೊಳ್ಳಲು ವಾರಗಟ್ಟಲೆ ಕಂಪನಿಗಳ ಮುಂದೆ ಸರಣಿ ಸಾಲಿನಲ್ಲಿ ನಿಲ್ಲುವ ದುಸ್ಥಿತಿ ಬಂದಿದೆ. ಕಾರಣವನ್ನು ಕೇಳಿದರೆ ಸರ್ವರ್ ಡೌನ್ ಎಂದು ಹೇಳುತ್ತಿದ್ದಾರೆ. ಮೀಟರ್ ತಯಾರಿ ಮಾಡಿಕೊಳ್ಳಲು ಅಂಗಡಿಗಳ ಮುಂದೆ ಕನಿಷ್ಠ 5 ದಿವಸಗಳ ಕಾಲ ಕಾಯಬೇಕಿದೆ. ಅಲ್ಲಿಯ ತನಕ ಬಡ ಆಟೋ ಚಾಲಕರುಗಳು ಹಾಗೂ ಅವರ ಕುಟುಂಬದವರಿಗೆ ಉಪವಾಸವೇ ಗಟ್ಟಿಯಾಗಿದೆ”

“ಈಗಾಗಲೇ ಆಟೋ ಚಾಲಕರುಗಳು ತಮ್ಮ ಮಕ್ಕಳ ಶಾಲಾ ಶುಲ್ಕಗಳು, ಆರೋಗ್ಯ ವೆಚ್ಚಗಳು ಹಾಗೂ ಹಬ್ಬ ಹರಿದಿನಗಳ ಸಲುವಾಗಿ ತಮ್ಮಲ್ಲಿದ್ದ ಹಣವನ್ನು ಖರ್ಚು ಮಾಡಿಕೊಂಡು ಈಗ ಸಾಲಗಾರರ ಸುಳಿಗೆ ಸಿಲುಕುವಂತಹ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ. ಆಟೋ ಚಾಲಕರುಗಳಿಗೆ ಪರ್ಮಿಟ್ ಸೇರಿದಂತೆ ಎಲ್ಲ ತಮ್ಮಲ್ಲಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿ ಬಡ ಆಟೋ ಚಾಲಕರ ಕುಟುಂಬ ನಿರ್ವಹಣೆಗೆ ಸರ್ಕಾರ ಈ ಮೂಲಕ ನೆರವಾಗಬೇಕು” ಎಂದು ಪಕ್ಷದ ಪರವಾಗಿ ಸಚಿವರಲ್ಲಿ ಮನವಿಯನ್ನು ಮಾಡಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...