ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

Date:

Advertisements

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದರು.

“ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು” ಎಂದು ಹೇಳಿದರು.

Advertisements

“ಬಿಬಿಎಂಪಿ ಗುತ್ತಿಗೆದಾರರಿಂದ ನಿಮಗೆ ವೇತನ ಪಾವತಿ ಆಗುವುದಿಲ್ಲ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯನ್ನು (ಬಿಎಸ್ಡಬ್ಲ್ಯೂಎಂಎನ್) ಬೆಂಗಳೂರು ನಗರದ ಕಸ ನಿರ್ವಹಣೆಗೆಂದು ಸ್ಥಾಪಿಸಲಾಗಿದೆ. ಇದನ್ನು ಗುತ್ತಿಗೆದಾರರು ನಿರ್ವಹಣೆ ಮಾಡುವುದಿಲ್ಲ. ಇದರ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೇ ಇರುತ್ತಾರೆ” ಎಂದು ತಿಳಿಸಿದರು.

ಡಿಸಿಎಂ ಅವರಿಗೆ ಸಲ್ಲಿಸಿದ್ದ ಮನವಿಯಲ್ಲಿ, “2017 ರಲ್ಲಿ ಎನ್ ಎಚ್ ಯುಎಂ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರನ್ನು ಘನತ್ಯಾಜ್ಯ ನಿರ್ವಹಣಾ ವಿಭಾಗಕ್ಕೆ ವರ್ಗವಣೆ ಮಾಡಲಾಯಿತು. ಈಗ ಬಿ.ಎಸ್.ಡಬ್ಲ್ಯೂ.ಎಂ.ಎನ್ ಕಡೆಯಿಂದ ವೇತನ ಪಾವತಿ ಎಂದು ತಿಳಿಸಿರುತ್ತಾರೆ. ಕಳೆದ‌ 30 ವರ್ಷಗಳಿಂದ ಪಾಲಿಕೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ಬಿಬಿಎಂಪಿಯಿಂದಲೇ ವೇತನ‌ ಪಾವತಿ ವ್ಯವಸ್ಥೆ ಮಾಡಬೇಕು ಎಂದು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ...

ಬೆಂಗಳೂರು | ಸಿಲಿಂಡರ್ ಸ್ಫೋಟ ದುರಂತ: ಘಟನಾ ಸ್ಥಳಕ್ಕೆ ಸಚಿವ ಝಮೀರ್ ಭೇಟಿ; ಪರಿಹಾರ ಧನ ವಿತರಣೆ

ಸಚಿವ ಝಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ಬೆಂಗಳೂರು | ಮನೆಗಳ್ಳತನ : ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳ ಬಂಧನ

ಬೆಂಗಳೂರು ನಗರದ ಮನೆಯೊಂದಕ್ಕೆ ನುಗ್ಗಿ ನಗದು ಸಹಿತ ಚಿನ್ನಾಭರಣ ಕಳವುಗೈದಿದ್ದ ಗ್ಯಾಂಗ್‌ವೊಂದನ್ನು...

Download Eedina App Android / iOS

X