ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ: ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೋಹನ್ ರಾಜ್ ಭರವಸೆ

Date:

ಅಂತರ್ಜಾತಿ ವಿವಾಹಿತರಿಗೆ ಸರ್ಕಾರದಿಂದ ನೀಡಬೇಕಿರುವ ಪ್ರೋತ್ಸಾಹಧನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ., ಐಎಎಸ್ ಅವರನ್ನು ಬೆಂಗಳೂರಿನ ವಿಕಾಸ ಸೌಧದಲ್ಲಿ ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಅಂತರ್ಜಾತಿ ವಿವಾಹ ಮಾಡಿಕೊಂಡ ಅನೇಕ ದಂಪತಿಗಳು ಕುಟುಂಬದ ಬೆಂಬಲವಿಲ್ಲದೆ ಜೀವನ ನಡೆಸುತ್ತಿರುವ ಪರಿಸ್ಥಿತಿಯಲ್ಲಿದ್ದಾರೆ. ಸಮಾಜದಲ್ಲಿರುವ ಜಾತೀಯತೆಯನ್ನು ಮೀರಿ ವಿವಾಹವಾಗುವವರಿಗೆ ಸರ್ಕಾರದ ಪ್ರೋತ್ಸಾಹಧನ ಅತ್ಯಂತ ಅಗತ್ಯವಾಗಿದೆ. ಆದರೆ, ಹಲವು ತಿಂಗಳುಗಳಿಂದ ಪ್ರೋತ್ಸಾಹಧನ ಬಿಡುಗಡೆ ಆಗದಿರುವುದರಿಂದ ಫಲಾನುಭವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ., ಸರ್ಕಾರದ ಗಮನಕ್ಕೆ ವಿಷಯವನ್ನು ತಂದು, ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಭೆಯ ವೇಳೆ ಅಂತರ್ಜಾತಿ ವಿವಾಹಿತರು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಕುಟುಂಬ ಸಂಬಂಧಿತ ಸಮಸ್ಯೆಗಳ ಕುರಿತು ಸಂಘಟನೆಯ ಪ್ರತಿನಿಧಿಗಳು ಕಾರ್ಯದರ್ಶಿಗಳಿಗೆ ವಿವರವಾದ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಕಾರ್ಯದರ್ಶಿಗಳು ಗಮನದಿಂದ ಆಲಿಸಿ, ಸಂಬಂಧಿತ ವಿಷಯಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಭೇಟಿಯಲ್ಲಿ ಸಂಘಟನೆಯ ಮೈಸೂರು ಜಿಲ್ಲಾ ಸಂಚಾಲಕ ಸಿ. ಉಮಾಮಹದೇವ, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ್ ಕಟ್ಟೆ ಮಳಲವಾಡಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...