ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ತಲುಪಿಸಿದ ನಟ ಯಶ್

Date:

ಬ್ಯಾನರ್‌ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಮೂವರು ಮೃತ ಅಭಿಮಾನಿಗಳ ಕುಟುಂಬದವರಿಗೆ ನಟ ಯಶ್ ತಲಾ ₹5 ಲಕ್ಷ ಚೆಕ್‌ ನೀಡಿದ್ದಾರೆ.

ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ ಚೆಕ್‌ ನೀಡಿದ್ದಾರೆ.

ಏನಿದು ಘಟನೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿ ವರ್ಷದಂತೆ ಈ ವರ್ಷವೂ ನಟ ಯಶ್ ಅವರ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಣೆ ಮಾಡೋದಕ್ಕೆ ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಯಶ್ ಅಭಿಮಾನಿಗಳು ತಯಾರಿ ನಡೆಸಿದ್ದರು. ಈ ವೇಳೆ, ನಟ ಯಶ್ ಅವರ ಆರು ಅಡಿ ಕಟೌಟ್‌ ಮಾಡಿಸಿ ಗ್ರಾಮದ ಅಂಬೇಡ್ಕರ್ ಸರ್ಕಲ್‌ನಲ್ಲಿ ಕಟ್ಟಲು ಮಧ್ಯರಾತ್ರಿಯನ್ನು ಆಯ್ಕೆ ಮಾಡಿಕೊಂಡಿದ್ದರು.

ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಹನಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಕೆಳಗೆ ಕಟೌಟ್ ಹಿಡಿದುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿ, ಅವರು ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯ ಕೈ-ಕಾಲು ಕಟ್ಟಿಹಾಕಿ ದರೋಡೆ; ಐವರ ಬಂಧನ

ಈ ವಿಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು. ಇನ್ನುಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...