ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ ಶುರು

Date:

Advertisements

ನಾಳೆಯಿಂದ (ಫೆ.10) 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಯಲಹಂಕದ ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನೀರಿಕ್ಷೆಗಳನ್ನು ಹುಟ್ಟಿಸಿದೆ.

ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ಘೋಷ ವಾಕ್ಯದೊಮದಿಗೆ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ಸಿದ್ಧವಾಗಿವೆ.

ಕಾರ್ಯಕ್ರಮವನ್ನು ಭಾರತೀಯ ರಕ್ಷಣಾ ಇಲಾಖೆಯ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮೊದಲ ಮೂರು ದಿನ ಅಂದರೆ ಫೆಬ್ರವರಿ 10, 11, 12ರವರೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಹಾರ ದಿನಗಳಾಗಿರುತ್ತವೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ, ವಸ್ತು ಪ್ರದರ್ಶನಗಳನ್ನು ಒಳಗೊಂಡಿದೆ.

ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಸ್ವದೇಶಿಕರಣವನ್ನು ಉತ್ತೇಜಿಸುವುದು, ಅತ್ಯಾಧುನಿಕ ತಂತ್ರಜ್ಞಾನಗಳು, ಉತ್ಪನ್ನಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಈಗಾಗಲೇ 700ಕ್ಕೂ ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಲು ತಯಾರಿಗಳು ನಡೆಯುತ್ತಿವೆ. ಏರ್ ಶೋನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪಾಲಿಕೆ, ಜಿಲ್ಲಾಡಳಿತ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X