ಸಿಲಿಂಡರ್ ಸ್ಫೋಟ, ಮನೆಗಳ ಹಾನಿ ವೀಕ್ಷಿಸಿದ ವಸತಿ ಸಚಿವ ಜಮೀರ್, 12 ಮನೆ ನಿರ್ಮಿಸುವುದಾಗಿ ಭರವಸೆ

Date:

ಬೆಂಗಳೂರಿನ ಸಿವಿ ರಾಮನ್ ನಗರದ ಸಂಜಯ ನಗರ ಕೊಳಗೇರಿಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಹಾನಿಯಾದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿದರು.

- Advertisement -

ಘಟನೆಯಿಂದ ಶಿಥಿಲಗೊಂಡಿರುವ 6 ಮನೆ ಒಳಗೊಂಡ ಇಡೀ ಬ್ಲಾಕ್‌ನ 12 ಮನೆಗಳನ್ನು ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ತಮ್ಮ ವಿವೇಚನಾ ನಿಧಿ ಯಿಂದ ಹೊಸದಾಗಿ ಕಟ್ಟಿಕೊಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

1994 ರಲ್ಲಿ ಹುಡ್ಕೋ ಅನುದಾನದಡಿ ಇಲ್ಲಿ ನಿರ್ಮಿಸಿ ರುವ 130 ಮನೆಗಳು ಶಿಥಿಲ ಗೊಂಡಿರುವ ಬಗ್ಗೆ ಸ್ಥಳೀಯರು ಮನವಿ ಮಾಡಿಕೊಂಡರು. ಈ ಬಗ್ಗೆ ಮುಖ್ಯಮಂತ್ರಿ ಯವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳವುದಾಗಿ ಸಚಿವರು ತಿಳಿಸಿದರು.

ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಾಳು ಗಳನ್ನು ಭೇಟಿ ಮಾಡಿ ಉಚಿತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿ ಅಣ್ಣಾ ದೊರೆ ಎಂಬುವರಿಗೆ 50 ಸಾವಿರ ರೂ. ನೀಡಿದರು. ಇದೇ ಘಟನೆಯಲ್ಲಿ ಎರಡು ದ್ವಿಚಕ್ರ ವಾಹನ ಜಖಂಗೊಂಡಿದ್ದು, ರಿಪೇರಿ ಗಾಗಿ ತಲಾ 25 ಸಾವಿರ ನೀಡಿದರು. ಕಾಂಗ್ರೆಸ್ ಮುಖಂಡ ಆನಂದ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...