ಏರ್ ಶೋ -2025 | ವೈಮಾನಿಕ ಪ್ರದರ್ಶನಕ್ಕೆ ಇಂದು ಚಾಲನೆ, ಫೆ.14ರವರೆಗೆ ಲೋಹದ ಹಕ್ಕಿಗಳ ಚಿತ್ತಾರ

Date:

Advertisements

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಖ್ಯಾತಿಯ ಬೆಂಗಳೂರು ಏರ್​​ ಶೋಗೆ ಸೋಮವಾರ ಅದ್ದೂರಿ ಚಾಲನೆ ಸಿಗುತ್ತಿದೆ. ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ.

‘ರನ್​ವೇ ಟು ಬಿಲಿಯನ್ ಅಪಾರ್ಚುನಿಟಿಸಿ’ ಟ್ಯಾಗ್ ಲೈನ್​ನಲ್ಲಿ‌ ಏರ್​ಶೋ-2025 ಆಯೋಜಿಸಲಾಗಿದೆ. ನೋಡುಗರ ಹೃದಯಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಮತ್ತು ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆ ಆಗಲಿದೆ.

ಸುದ್ದಿಗೋಷ್ಠಿಯಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, “ವೈಮಾನಿಕ ಪ್ರದರ್ಶನದ ರೂಪುರೇಷೆಗಳ ಮಾಹಿತಿ ನೀಡಿದರು. ಇದು ಕೇವಲ ತಂತ್ರಜ್ಞಾನ-ಕೌಶಲ ತೋರಿಸಲು ಇರುವ ಪ್ರದರ್ಶನವಲ್ಲ. ಬದಲಿಗೆ ಕೋಟ್ಯಂತರ ಯುವಮನಸುಗಳಲ್ಲಿ ಸ್ಫೂರ್ತಿಯ ಸೆಲೆ ಬಿತ್ತುವ ವೇದಿಕೆ ಆಗಲಿದೆ. ಬೆಂಗಳೂರು ಏರ್ ಶೋ ಎಂದೇ ಖ್ಯಾತವಾಗಿರುವ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿ ಎಲ್ಲ ರೀತಿಯಲ್ಲೂ ಹಿಂದೆಂದಿಗಿಂತ ದೊಡ್ಡದಾಗಿ ಇರಲಿದೆ. ಯಲಹಂಕದಲ್ಲಿ ಇರುವ ವಾಯುಪಡೆಯ ವಿಶಾಲ ಮೈದಾನದಲ್ಲಿ ಪ್ರದರ್ಶನಕ್ಕೆ ಎಲ್ಲ ಸಿದ್ಧತೆಗಳೂ ಅಂತಿಮವಾಗಿವೆ” ಎಂದಿದ್ದಾರೆ.

Advertisements

ಇಂದು ಬೆಳಗ್ಗೆ 9.30ಕ್ಕೆ ಏರ್ ​ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.

ಏರ್​​ಶೋದಲ್ಲಿ ರಷ್ಯಾ ಮತ್ತು ಅಮೆರಿಕನ್​ ಫೈಟ್​ ಏರ್​ಕ್ರಾಫ್ಟ್​ಗಳು ಭಾಗಿ ಆಗಲಿವೆ. 100 ದೇಶಗಳ 900ಕ್ಕೂ ಹೆಚ್ಚು ರಕ್ಷಣಾ ಸಾಮಗ್ರಿ ಉತ್ಪಾದಕರು ಭಾಗವಹಿಸಲಿದ್ದಾರೆ. ವಿವಿಧ ಕಂಪನಿಗಳ 100 ಸಿಇಒಗಳು, 50 ವಿದೇಶಿ ಒಎಂಎಸ್ ಉಪಸ್ಥಿತರಿರಲಿದ್ದಾರೆ. ಎಐ, ಸೈಬರ್ ಸೆಕ್ಯುರಿಟಿ, ಡ್ರೋನ್ ಮತ್ತು ಗ್ಲೋಬಲ್​ ಏರೋಸ್ಪೇಸ್ ಪ್ರದರ್ಶನವಿದೆ. ಆತ್ಮನಿರ್ಭರ ಭಾರತದ ಉತ್ಪನ್ನಗಳು ಇರಲಿದ್ದು 10 ಸೆಮಿನಾರ್​​ಗಳು ಆಯೋಜಿಸಲಾಗಿದೆ. ರಕ್ಷಣಾ ವಲಯದಲ್ಲಿ ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯ ಬಗ್ಗೆ ಚರ್ಚೆ ಆಗಲಿದೆ.

ಸಂಚಾರ ಬದಲಾವಣೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಏರ್​​ ಶೋನಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಯಲಹಂಕ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿ ಹಾಗೂ ಬಾಗಲೂರು ಮುಖ್ಯರಸ್ತೆಯಲ್ಲೂ ಏಕಮುಖ ಸಂಚಾರ ಇದೆ. GKVK ಕ್ಯಾಂಪಸ್​​​ನಲ್ಲಿ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ಅಲ್ಲಿಂದ ಉಚಿತ ಬಿಎಂಟಿಸಿ ಎಸಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಫೆಬ್ರವರಿ 14ರವರೆಗೆ ಲೋಹದ ಹಕ್ಕಿಗಳು ಚಿತ್ತಾರ ಮೂಡಿಸಲಿವೆ. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಜನ ಏರ್​ಶೋದಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ. ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಕೂಡ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X