ಏರ್‌ ಶೋ-2025ಕ್ಕೆ ಚಾಲನೆ | ಬೆಂಗಳೂರಲ್ಲಿ ಯುದ್ಧ ವಿಮಾನಗಳ ಮಹಾ ಕುಂಭಮೇಳ: ರಾಜನಾಥ್ ಸಿಂಗ್

Date:

ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ ಹಾಗೂ ಯುದ್ಧ ವಿಮಾನಗಳ ಮಹಾ ಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

- Advertisement -

ಯಲಹಂಕ ವಾಯುನೆಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಏರ್‌ ಶೋ-2025ಗೆ ಚಾಲನೆ ನೀಡಿ ಮಾತನಾಡಿದ ಅವರು, “ಹೊಸ ಸವಾಲುಗಳಿಗೆ ಉತ್ತರ ಹುಡುಕುವ ಕಾರ್ಯ ಮಾಡಬೇಕಿದೆ. ಶಾಂತಿ, ಶಕ್ತಿ ನಮ್ಮ ಮಂತ್ರ ಬಲ ಆಗಬೇಕಿದೆ. ನಾವು ಬಲಾಢ್ಯರಾಗಿ ವಿಶ್ವದಲ್ಲಿ ನಮ್ಮ ಸ್ಥಾನ ಪ್ರದರ್ಶನ ಮಾಡಬೇಕಿದೆ. ಅತ್ಯಾಧುನಿಕ ಅನ್ವೇಷಣೆ ಮೂಲಕ ನಾವು ಮುಂದೆ ಹೆಜ್ಜೆ ಇಟ್ಟಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. 10 ವರ್ಷಗಳಿಂದ ವೈಮಾನಿಕ‌ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 1,080 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ. ಬೆಂಗಳೂರು ಇನ್ನೋವೇಷನ್ ಹಬ್, ಸಾಫ್ಟ್‌ವೇರ್​ನ ಹೆಗ್ಗಳಿಕೆ ಹೊಂದಿರುವ ನಗರ. ಏರೋಸ್ಪೇಸ್ ಮೂಲಕವೂ ಬೆಂಗಳೂರು ಹೆಸರುವಾಸಿಯಾಗುತ್ತಿದೆ” ಎಂದು ರಾಜನಾಥ್ ಸಿಂಗ್ ತಿಳಿಸಿದರು.

“ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು
ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

“ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ತಯಾರಕರನ್ನು ಹೆಚ್ಚು, ‌ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ. ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ” ಎಂದರು.

“ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ಏರ್ ಶೋ ಮೂಲಕ ನಾವು ಕಂಡುಕೊಳ್ಳಬಹುದು. ಬೆಂಗಳೂರು ಏರ್ ಶೋ ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ” ಎಂದು ತಿಳಿಸಿದರು.

“ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ.2013 ರಲ್ಲಿ ಏರೋಸ್ಪೇಸ್ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ. ಇಂದು ಏರೋಸ್ಪೇಸ್ ಉದ್ಯಮವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್‌ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...