“ಅಮಿತ್ ಶಾ ಕೇಡಿ, ಹಾಕಿರಿ ಅವನಿಗೆ ಬೇಡಿ” ; ದಸಂಸ ಆಕ್ರೋಶ

Date:

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ.

- Advertisement -

ಪ್ರತಿಭಟನೆ ವೇಳೆ, ‘ಅಮಿತ್ ಶಾ ಕೇಡಿ – ಹಾಕರಿ ಅವನಿಗೆ ಬೇಡಿ’ ಎಂಬಿತ್ಯಾದಿ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಮಿತ್ ಶಾ ಅವರ ಪ್ರತಿಕೃತಿ ಜತೆಗೆ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದರು. ಗೃಹ ಸಚಿವ ಸ್ಥಾನದಿಂದ ಅಮಿತಾ ಶಾ ಅವರನ್ನ ಕೂಡಲೇ ವಜಾಗೊಳಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಶಂಕರ ಮಾವಳ್ಳಿ, “ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನ ಅಪಮಾನಿಸಿದರ ವಿರುದ್ದ ಇಡೀ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸಂಸತ್‌ನಲ್ಲಿ ಸಂವಿಧಾನ ಆಶಯಗಳ ಬಗ್ಗೆ ಮಾತನಾಡುವಾಗ ಅಮಿತ್ ಶಾ ವಿಷಪೂರಿತವಾದ ಮಾತುಗಳನ್ನಾಡಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದವರು. ಹಾಗೆಯೇ ಅವರನ್ನು ಗುಜರಾತ್ ಸರ್ಕಾರ ಗಡಿಪಾರು ಮಾಡಿತ್ತು. ಇಂತಹ ವ್ಯಕ್ತಿಯೇ ಇದೀಗ ದೇಶದ ಗೃಹ ಮಂತ್ರಿ ಆಗಿರುವುದು ನಿಜಕ್ಕೂ ದುರಂತ. ಪ್ರಧಾನಿಗೆ ನಿಜವಾಗಿ ಸಂವಿಧಾನದ ಬಗ್ಗೆ ಗೌರವ ಇದ್ದರೆ, ಈ ಕೂಡಲೇ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

ದಸಂಸ ಮುಖಂಡೆ ಚಂದ್ರಿಕಾ ಮಾತನಾಡಿ, “ಸಂವಿಧಾನವನ್ನ ಜಾರಿಗೆ ತಂದವರಿಗೆ ಈಗ ಬೆಲೆ ಕೊಡುತ್ತಿಲ್ಲ. ಕೆಂದ್ರದ ಗೃಹ ಮಂತ್ರಿಯಾಗಿ ಈ ರೀತಿ ಮಾತನಾಡುವುದು ಎಷ್ಟು ಸರಿ? ನಮಗೆ ಎಲ್ಲಿ ಹಕ್ಕಿದೆ ನ್ಯಾಯ ಎಲ್ಲಿದೆ ಎಂದು ಇಂಥವರಿಗೆ ಮತ ಹಾಕಿರುವ ನಾವು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಅಮಿತ್ ಶಾಗೆ ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಅವರು ರಾಜೀನಾಮೆ ನೀಡಬೇಕು” ಎಂದು ಹೇಳಿದರು.

ದಸಂಸದಸಂಸ ರಾಜ್ಯ ಪ್ರಧಾನ ಸಂಚಾಲಕಿ ನಿರ್ಮಲಾ ಮಾತನಾಡಿ, “ನಮ್ಮ ಸಂವಿಧಾನ ಕರ್ತೃ ಅಂಬೇಡ್ಕರ್ ಅವರಿಗೆ ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಈ ಕೂಡಲೇ ಮಂತ್ರಿಗಿರಿಯಿಂದ ವಜಾಗೊಳಿಸಬೇಕು. ದೇಶದ ಉನ್ನತ ಸ್ಥಾನದಲ್ಲಿರುವ ಅಮಿತ್ ಶಾ ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದ ಸಮಯದಲ್ಲಿ ಈ ರೀತಿ ಮಾತಾಡಿರುವುದು ನಿಜಕ್ಕೂ ಖಂಡನೀಯ. ಅಮಿತ್ ಶಾಗೆ ತಲೆಲಿ ಕೂದಲು ಇಲ್ಲ ಅಂತ ಗೊತ್ತಿತ್ತು. ಆದರೆ, ಆತನ ತಲೆಯಲ್ಲಿ ಮಿದುಳು ಕೂಡ ಇಲ್ಲ. ಬುದ್ದಿ ಇಲ್ಲದ ಅಮಿತ್ ಶಾ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಅಮಿತ್ ಶಾ ಹೇಳಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ನಿಂದ ‘ಅಂಬೇಡ್ಕರ್ ಸಮ್ಮಾನ್ ಮಾರ್ಚ್’

“ಅಂಬೇಡ್ಕರ್ ಅನ್ನೋದು ಒಂದು ವ್ಯಸನ ಅಂತ ಮುಟ್ಟಾಳ ಅಮಿತ್ ಶಾ ಹೇಳುತ್ತಾನೆ. ಆತನಿಗೆ ಅಂಬೇಡ್ಕರ್ ಅವರ ಬಗ್ಗೆ, ಸಂವಿಧಾನದ ಬಗ್ಗೆ ಏನು ಗೊತ್ತಿದೆ? ಅಮಿತ್ ಶಾಗೆ ನಿಜಕ್ಕೂ ಮಾನ ಮರ್ಯಾದೆ ಇದ್ದರೆ, ದಲಿತರ ಮಲ ಮೂತ್ರದಿಂದ ತನ್ನ ನಾಲಿಗೆಯನ್ನು ಶುದ್ದ ಮಾಡಿಕೊಳ್ಳಲಿ. ಗೋ ಮೂತ್ರದಿಂದ ಅವರ ನಾಲಿಗೆ ಶುಚಿಯಾಗುವುದಿಲ್ಲ. ಕಲಾಪದಲ್ಲಿ ಹೆಣ್ಣಿನ ಬಗ್ಗೆ ನೀಚವಾಗಿ ಮಾತಾಡುತ್ತಾರೆ. ಇಡೀ ಪ್ರಪಂಚ ಈ ವಿಚಾರವಾಗಿ ರೊಚ್ಚಿಗೇಳಬೇಕು. ಇನ್ನೊಂದು ಬಾರಿ ಸಂವಿಧಾನದ ಬಗ್ಗೆ, ಅಂಬೇಡ್ಕರ್ ಅವರ ಬಗ್ಗೆ ಮಾತಾಡಿದರೆ, ಅವರಿಗೆ ಚಪ್ಪಲಿ ಹಾರ ಹಾಕುತ್ತೀವಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...