ಕ್ಷುಲ್ಲಕ ಕಾರಣಕ್ಕೆ ಬಾರ್‌ನಲ್ಲಿ ಕಿತ್ತಾಡಿಕೊಂಡ ಕಿರುತೆರೆ ನಟನ ವಿರುದ್ಧ ಎಫ್‌ಐಆರ್ ದಾಖಲು

Date:

  • ಆರ್ ಆರ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು
  • ಅಮೃತವರ್ಷಿಣಿ, ಅಣ್ಣ ತಂಗಿ ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರಜ್ವಲ್

ಹಲವು ಕನ್ನಡ ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದ ಕಿರುತೆರೆ ನಟ ಪ್ರಜ್ವಲ್ ಬಾರ್‌ನಲ್ಲಿ ಓರ್ವನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದೀಗ ನಟನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಹಲ್ಲೆಗೊಳಗಾದ ವ್ಯಕ್ತಿ ಚೇತನ್ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ನಟನ ವಿರುದ್ಧ ಆರ್ ಆರ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರಜ್ವಲ್ ಅಮೃತವರ್ಷಿಣಿ ಮತ್ತು ಅಣ್ಣ ತಂಗಿ ಕನ್ನಡ ಧಾರಾವಾಹಿಗಳಲ್ಲಿ ನಟಿಸಿ, ಗುರುತಿಸಿಕೊಂಡಿದ್ದರು. ಜನಮನ್ನಣೆ ಗಳಿಸಿಕೊಂಡಿದ್ದರು.

ಪ್ರಜ್ವಲ್ ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ಗೆ ತಮ್ಮ ಸ್ನೇಹಿತರ ಜತೆ ತೆರಳಿದ್ದಾರೆ. ಹಲ್ಲೆಗೊಳಗಾದ ಚೇತನ್ ಎಂಬ ವ್ಯಕ್ತಿ ಕೂಡ ತನ್ನ ಸ್ನೇಹಿತರೊಂದಿಗೆ ಬಾರ್‌ಗೆ ಹೋಗಿದ್ದರು. ಈ ವೇಳೆ ಚೇತನ್, ಪ್ರಜ್ವಲ್ ಸ್ನೇಹಿತ ಮನು ಎಂಬುವವರನ್ನು ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಕೋಪಗೊಂಡು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ. ಬಾರ್‌ನೊಳಗೆ ಜಗಳ ಮಾಡಿದ್ದಲ್ಲದೇ, ಈ ಗುಂಪು ರಸ್ತೆಯಲ್ಲಿ ಕಿತ್ತಾಡಿಕೊಂಡಿದೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ನಂದೀಶ್‌ ರೆಡ್ಡಿ ವಿರುದ್ಧ ಬಿಬಿಎಂಪಿ ದೂರು

ಪ್ರಜ್ವಲ್ ಬಾರಿನಲ್ಲಿಯೇ ಇದ್ದ ಮರದ ತುಂಡಿನಿಂದ ತಮ್ಮ ಮೇಲೆ ಹಲ್ಲೆ ಮಾಡಿರುವುದಾಗಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಚೇತನ್ ಆರ್‌ ಆರ್‌ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಚೇತನ್ ಕೊಟ್ಟ ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೋಟಿಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...