‘ಗೃಹಜ್ಯೋತಿ’ ವಿರುದ್ಧ ಚೆಂಡು ಹೂವು ಮುಡಿದುಕೊಂಡು ವಿನೂತನ ಪ್ರತಿಭಟನೆ: ಆಪ್

Date:

Advertisements
  • ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ
  • ಕಾಂಗ್ರೆಸ್‌ಗೆ ನೀಡಿರುವ ಬಹುಮತ 40% ಕಮಿಷನ್, ಜನ ವಿರೋಧಿ ಬಿಜೆಪಿ ವಿರುದ್ಧ ನೀಡಿದ ಮತ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತು ವಿಧಿಸಿ ಜನರ ಕಿವಿಗಳಿಗೆ ಹೂವು ಮುಡಿಸುವ ಮೂಲಕ ಪರಮ ಅನ್ಯಾಯ, ಮೋಸ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೆಹಲಿ ಮಾದರಿಯಲ್ಲಿ ಯಾವುದೇ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡಲಾಗದೆ ಅನೇಕ ಷರತ್ತುಗಳನ್ನು ವಿಧಿಸಿ ಬಡವರು ಬಡವರಾಗಿ ಇರುವಂತಹ ಗ್ಯಾರಂಟಿ ನೀಡಿದ್ದಾರೆ. ಕಾಂಗ್ರೆಸ್‌ನ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಚೆಂಡು ಹೂವು ಮುಡಿದುಕೊಂಡು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆಯನ್ನು ಮಾಡಲಿದ್ದಾರೆ ಎಂದು ಹೇಳಿದರು.

Advertisements

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, “ಕಾಂಗ್ರೆಸ್‌ಗೆ ನೀಡಿರುವ ಬಹುಮತ 40% ಕಮಿಷನ್ ಹಾಗೂ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನೀಡಿದ ಮತವೆ ಹೊರತು ಕಾಂಗ್ರೆಸ್‌ಗೆ ನೀಡಿರುವ ಮತವಲ್ಲ. ಈ ಹಿಂದಿನ ಅಧಿಕಾರಾವಧಿಯಲ್ಲಿ ಮಾಡಿದ್ದಂತಹ ಅನೇಕ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಜನ ವಿರೋಧಿ ನೀತಿಯನ್ನು ಮತ್ತೊಮ್ಮೆ ಮುಂದುವರಿಸಿದಲ್ಲಿ ಜನತೆ ತಕ್ಕ ಪಾಠವನ್ನು ಕಲಿಸಿಕೊಡುತ್ತದೆ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಕಂಡುಹಿಡಿದ ಐಐಎಸ್‌ಸಿಯ ಸಂಶೋಧಕರು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯವು ಈಗಾಗಲೇ ಎಲ್ಲವನ್ನೂ ನೀಡಿದೆ. ಇವರು ರಾಜ್ಯದ ಜನತೆಗೆ ಮರಳಿ ನೀಡಿ ಋಣವನ್ನು ತೀರಿಸಿಕೊಳ್ಳುವಂತಹ ಅವಕಾಶವಿರುವಾಗ ಪ್ರಾಮಾಣಿಕವಾಗಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X