ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ: ಸರ್ಕಾರ ತೀರ್ಮಾನ

Date:

ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್‌ ತಿಳಿಸಿದರು.

- Advertisement -

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, “ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ 11 ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗಿತ್ತು. 13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿರುತ್ತದೆ. 27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ 11.00 ಕೋಟಿ ರೂ.ಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ) ನಿಗದಿಗೊಳಿಸಲಾಗಿತ್ತು. 1996ರ ಈ ಕಾಯ್ದೆಗೆ ಸುಪ್ರೀಂ ಕೋರ್ಟ್‌ದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, 10.12.2024ರ ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ 3,014 ಕೋಟಿ ರೂ. ಅಂದರೆ ಪ್ರತಿ ಎಕರೆಗೆ 200 ಕೋಟಿ ರೂ.ನೀಡಿದರೆ ಆರ್ಥಿಕ ಪರಿಸ್ಥಿತಿಗೆ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ. 1996ರ ಕಾಯ್ದೆಗೆ ಪೂರಕವಾದ ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ” ಎಂದು ಸಚಿವರು ಹೇಳಿದರು.

ಅಭಿವೃದ್ಧಿಗೆ ಗಂಡಾಂತರ

“ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3,014 ಕೋಟಿ ರೂ.ಗಳನ್ನು 15.36 ಎಕರೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ. ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ. 3,014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ” ಎಂದರು.

“ರಾಜ್ಯದ ಬೊಕ್ಕಸವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಿಂದೆ ಮಾಡಿರುವ ಕಾನೂನು ಅನ್ವಯ ಅದನ್ನು ಮುಂದುವರಿಸುವ ದೃಷ್ಟಿಯಿಂದ ಅಧ್ಯಾದೇಶ ಹೊರಡಿಸಿದೆ. ಕರ್ನಾಟಕ ಕಾರ್ಯಕಲಾಪ ನಿರ್ಣಯಗಳ ಪ್ರಕಾರ ಯಾವುದಾದರೂ ನಿರ್ಣಯ ಅಥವಾ ಪ್ರಸ್ತಾವನೆಗಳನ್ನು. ನಮ್ಮ ನಿರ್ಧಾರ ರಾಜ್ಯ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ. ಸುಗ್ರೀವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ” ಎಂದು ವಿವರಿಸಿದರು.

“15 ಎಕರೆಗೆ 3,000 ಕೋಟಿಗಳನ್ನು ಕೊಡಲು ಸಾಧ್ಯವಿಲ್ಲ. 11 ಎಕರೆ ಜಾಗವನ್ನು 1996ರಲ್ಲಿಯೇ ಕೋಟಿಗಳನ್ನು ಕೊಟ್ಟು ಪಡೆಯಲಾಗಿದೆ. ಈ ಸಮಸ್ಯೆಗಳು ವ್ಯಾಜ್ಯಗಳು ಪರಿಹಾರವಾಗದ ಕಾರಣ ಉಂಟಾಗಿದೆ. ಟಿ.ಡಿ.ಆರ್ ಕೊಡದಿರಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ. 2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಸದರಿ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ 2014 ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತದೆ” ಎಂದರು.

ಪ್ರಮುಖ ನಿರ್ಣಯಗಳು

ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ

“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.

“ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಎಚ್‌ ಕೆ ಪಾಟೀಲ್‌ ಹೇಳಿದರು.

“ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು. ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ” ಎಂದರು.

ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ

“ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ಶನಿವಾರ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ. ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...