ಜೂನ್ 2ರಂದು ಲಾಲ್‌ಬಾಗ್‌ನಲ್ಲಿ ವಾರ್ಷಿಕ ಮಾವು ಮೇಳ ಆರಂಭ

Date:

  • ಜೂ. 2ರಿಂದ 11ರವರೆಗೆ ಲಾಲ್‌ಬಾಗ್‌ಗೆ ಎಲ್ಲ ಗ್ರಾಹಕರಿಗೆ ಉಚಿತ ಪ್ರವೇಶ
  • 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಮಾವು ಮೇಳ ವಿಳಂಬ

ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಾರ್ಷಿಕ ಮಾವು ಮೇಳ ಜೂನ್ 2ರಂದು ಆರಂಭವಾಗಲಿದೆ.

ನಗರದ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ ಆವರಣದಲ್ಲಿ ಒಟ್ಟು 9 ದಿನಗಳ ಕಾಲ ಮಾವು ಮೇಳ ನಡೆಯಲಿದೆ. ಜೂ. 2ರಿಂದ 11ರವರೆಗೆ ಲಾಲ್‌ಬಾಗ್‌ಗೆ ಎಲ್ಲ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದ್ದು, ಈ ವರ್ಷ ನಡೆಯುವ ಮೇಳದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಬೆಳೆದ ಮಾವು ಮಾರಾಟವಾಗಲಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಪ್ರತಿ ವರ್ಷ ಲಾಲ್‌ಬಾಗ್‌ನಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಈ ಮಾವು ಮೇಳ ನಡೆಯಲಿದೆ. ಈ ವರ್ಷ 2023ರ ವಿಧಾನಸಭಾ ಚುನಾವಣೆ ಹಿನ್ನಲೆ, ವಿಳಂಬವಾಗಿದೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಾರ್ಷಿಕ ಮೇಳದಲ್ಲಿ ನಾನಾ ರಾಜ್ಯಗಳಿಂದ ಹಲವಾರು ರೈತರು ಬಂದು ಮಾವು ಮಾರಾಟ ಮಾಡುತ್ತಾರೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಹಣ್ಣುಗಳು ಮಾರಾಟವಾಗಲಿವೆ. ಸುಮಾರು 100 ರಿಂದ 120 ಮಳಿಗೆಗಳು ಪ್ರತಿ ವರ್ಷ ಮೇಳದಲ್ಲಿರುತ್ತಿದ್ದವು. ಈ ವರ್ಷ ಆಲಿಕಲ್ಲು ಮಳೆಯಿಂದಾಗಿ ಮಾವಿನ ಇಳುವರಿ ಕಡಿಮೆಯಾಗಿದೆ. ಹಾಗಾಗಿ ಕಡಿಮೆ ಮಳಿಗೆಗಳು ತೆರೆಯಲಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೀನುಗಳ ಸಾವಿನ ನಂತರವೂ ಮಡಿವಾಳ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ಮೇಳದಲ್ಲಿ ಮಲ್ಲಿಕಾ, ಮಾಲ್ಗೋವಾ, ಸೆಂಧೂರ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಮಾವಿನ ಹಣ್ಣುಗಳು ಮೇಳದಲ್ಲಿ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...