ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯುವಂತೆ ಒತ್ತಾಯ: ಅಪಾರ್ಟ್‌ಮೆಂಟ್ ನಿವಾಸಿ ಕಿರುಕುಳ

Date:

  • ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • ಅವಮಾನ ತಾಳಲಾರದೆ ಕೆಲಸ ತೊರೆದ ಮಹಿಳೆ

ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ ಅಮಾನವೀಯ ಘಟನೆ ನಡೆದಿದೆ.

- Advertisement -

ರಾಜರಾಜೇಶ್ವರಿ ನಗರದ ಉನ್ನತ ಸೌಲಭ್ಯ ನಿರ್ವಹಣಾ ಕಂಪನಿಯಲ್ಲಿ ಹೊಂಗಸಂದ್ರದ ನಿವಾಸಿ 25 ವರ್ಷದ ಮಹಿಳೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲಸದ ನಿಮಿತ್ತ ಇವರನ್ನು ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ನಿರ್ವಹಿಸಲು ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜೂನ್ 14ರಂದು ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ 25 ವರ್ಷದ ಮಹಿಳೆ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆ, ಅಪಾರ್ಟ್‌ಮೆಂಟ್‌ ಈಜುಕೊಳದಲ್ಲಿ ಸ್ನಾನ ಮಾಡಲು ಬಂದ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಈಜುಕೊಳದಲ್ಲಿರುವ ಗಲೀಜು ನೀರು ನೋಡಿ ಕಿರುಚಾಡಿದ್ದಾರೆ.

ಈ ವೇಳೆ, ಮಹಿಳೆ ತಾನು ಸೆಕ್ಯೂರಿಟಿ ಡ್ಯೂಟಿಯಲ್ಲಿರುವುದಾಗಿ ಹಾಗೂ ಈಜುಕೊಳದ ನಿರ್ವಹಣೆಗೂ ತನಗೂ ಸಂಬಂಧವಿಲ್ಲ ಎಂದು ತಿಳಿಸಿದರೂ ಕೂಡ ಮಹಿಳೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಯೊಬ್ಬ ಬಲವಂತವಾಗಿ ಹಿಡಿದುಕೊಂಡು ಈಜುಕೊಳದ ಕೊಳಚೆ ನೀರನ್ನು ಬಾಟಲಿಯಲ್ಲಿ ಹಿಡಿದು ಕುಡಿಸಿದ್ದಾನೆ.

ಈ ಅವಮಾನ ತಾಳಲಾರದೆ ಮಹಿಳೆ ಕೆಲಸ ತೊರೆದಿದ್ದಾಳೆ. ಆರೋಪಿ ಆಕಾಶ್ ಎಂಬುವವರ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

“ಜೂನ್ 14 ರಂದು ಬೆಳಗ್ಗೆ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಜುಕೊಳದ ಗೇಟ್‌ ಅನ್ನು ಮುಚ್ಚಿ ಆ ಸ್ಥಳದಿಂದ ನಾನು ಹೊರಬರದಂತೆ ತಡೆದಿದ್ದಾರೆ. ವಿನಾಕಾರಣ ನನ್ನನ್ನು ಅವಮಾನಿಸಿದ್ದಾರೆ” ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ಭದ್ರತಾ ಮೇಲ್ವಿಚಾರಕ ಅನಿಕೇಶ್ ಚಕ್ರವರ್ತಿ ಮತ್ತು ನಿರ್ವಹಣಾ ವ್ಯವಸ್ಥಾಪಕ ಮಲ್ಲಿಕಾರ್ಜುನ್ ಅವರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ

“ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ಕಳುಹಿಸಲಾಗಿದೆ. ನಿರ್ವಹಣಾ ವ್ಯವಸ್ಥಾಪಕರಿಗೆ ವಿಷಯ ತಿಳಿಸಲಾಗಿದೆ. ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...