ಬೆಂಗಳೂರು | ದರೋಡೆಗೆ ಹೊಂಚು ಹಾಕಿದ್ದ ಐವರು ಆರೋಪಿಗಳ ಬಂಧನ

Date:

  • ಕುಖ್ಯಾತ ರೌಡಿಶೀಟರ್‌ ಮಹೇಶ್‌ನ ಸಹಚರರ ಬಂಧನ
  • ಬಂಧಿತರಿಂದ ಕಾರು ಹಾಗೂ ಮಾರಕಾಸ್ತ್ರಗಳ ಜಪ್ತಿ

ಸಾರ್ವಜನಿಕರಿಂದ ದರೋಡೆ ಮಾಡಲು ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕಿ ಕುಳಿದಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಐವರು ಆರೋಪಿಗಳು ಕುಖ್ಯಾತ ರೌಡಿಶೀಟರ್‌ ಮಹೇಶ್‌ ಅಲಿಯಾಸ್‌ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದಾರೆ. ಬಂಧಿತರಿಂದ ಫಾರ್ಚೂನರ್‌ ಕಾರು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಈ ಗ್ಯಾಂಗ್ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಪಕ್ಕದ ಬಿಟಿಎಸ್‌ ಸರ್ವಿಸ್‌ ರಸ್ತೆಯಲ್ಲಿ ಇದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಗ್ಯಾಂಗ್ ಕಳೆದ ವರ್ಷ ಬನಶಂಕರಿ ಮೆಟ್ರೋ ರೈಲು ನಿಲ್ದಾಣದ ಬಳಿ ರೌಡಿ ಶೀಟರ್‌ ಮದನ್ ಅಲಿಯಾಸ್ ಪಿಟೀಲ್‌ನನ್ನು ಗ್ಯಾಂಗ್ ಹತ್ಯೆ ಮಾಡಿತ್ತು. ವಿಲ್ಸನ್ ಗಾರ್ಡನ್ ನಾಗನ ವಿರೋಧದ ಗ್ಯಾಂಗ್ ಇದಾಗಿದೆ. ಆರೋಪಿಗಳು ಸಾರ್ವಜನಿಕರ ಸುಲಿಗೆ ಮಾಡುವ ಜತೆಗೆ ನಾಗನ ಮೇಲೆ ದಾಳಿ ಮಾಡಲು ಸಂಚು ರೂಪಿಸಿತ್ತು.

ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಡೆಲಿವರಿ ಬಾಯ್ ಸಾವು

ಸಿಸಿಬಿ ಪೊಲೀಸರು ಕಳೆದ 6-7 ತಿಂಗಳ ಹಿಂದೆ ದಾಳಿ ನಡೆಸಿ ರೌಡಿಗಳನ್ನು ಬಂಧಿಸಿದ್ದರು. ಈ ವೇಳೆ ಸಿದ್ದಾಪುರ ಮಹೇಶ್ ಪರಾರಿಯಾಗಿದ್ದನು. ಮತ್ತೆ ಆತನನ್ನು ಬಂಧಿಸಲಾಗಿತ್ತು. ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...