ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಕೆ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಗಳ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಕೆ ಮಾಡುತ್ತಿದ್ದ ಇಬ್ಬರು ಅಂತರ್ ರಾಜ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ನಗರದ ಉಲ್ಲಾಳ ಬಳಿ ಬಂಧಿಸಿದ್ದಾರೆ

- Advertisement -

ರಾಹುಲ್ ಸತೀಶ್​​ ಮಾನೆ, ಮಲ್ಲಿಕ್​ ಬಂಧಿತರು. ಬಂಧಿತರಿಂದ 2 ಕಂಟ್ರಿಮೇಡ್ ಪಿಸ್ತೂಲ್, 9 ಜೀವಂತ ಗುಂಡುಗಳು, ಒಂದು ಸ್ವಿಫ್ಟ್ ಡಿಸೈರ್ ಕಾರ್ ಸೇರಿ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಜನವರಿ 14ರಂದು ಬೆಳಗ್ಗೆ 11:30ರ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ರಿಂಗ್ ರಸ್ತೆಯ ಕೆರೆ ಬಳಿ ಅಕ್ರಮ ಪಿಸ್ತೂಲ್‌ಗಳು ಮತ್ತು ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಿದ ಸಿಸಿಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ)ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರು ಬಂಧಿತ ಆರೋಪಿಗಳು ಮೂಲತಃ ಮಹಾರಾಷ್ಟ್ರದವರು. ಪ್ರಕರಣವೊಂದರಲ್ಲಿ ಬಂಧನವಾಗಿ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಜೈಲಿನಲ್ಲಿದ್ದಾಗ ಕೆಲವು ರೌಡಿಗಳಿಗೆ ಪರಿಚಯವಾಗಿದ್ದರು. ಹೀಗಾಗಿ, ಜೈಲಿನಿಂದ ಹೊರಬಂದ ಬಳಿಕ ರೌಡಿಗಳ ಸಂಪರ್ಕದಲ್ಲಿದ್ದರು. ರೌಡಿಗಳಿಗೆ ಪಿಸ್ತೂಲ್ ಮಾರಾಟ ಮಾಡಲು ಬೆಂಗಳೂರಿಗೆ ಬಂದಿದ್ದರು.

ಈ ಸುದ್ದಿ ಓದಿದ್ದೀರಾ? ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಎಲ್ಲ ರೀತಿಯ ಸಿದ್ದತೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಪ್ರಮುಖ ಆರೋಪಿ ರಾಹುಲ್ ಸತೀಶ್ ಮಾನೆ ಮಹಾರಾಷ್ಟ್ರ, ಉತ್ತರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವ ಏಜೆಂಟ್ ಆಗಿದ್ದನು. ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಮಹಾರಾಷ್ಟ್ರದ ಮೀರಜ್‌ ಮಹಾತ್ಮಗಾಂಧಿ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಮೀರಜ್ ಟೌನ್ ಪೊಲೀಸ್ ಠಾಣೆಯಲ್ಲಿ 1, ಸಾಂಗ್ಲಿ ವೆಲ್‌ವಾಡಿ ಪೊಲೀಸ್ ಠಾಣೆಯಲ್ಲಿ 1, ಮೀರಜ್‌ನ ಎಂಐಡಿಸಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗು ಕರ್ನಾಟಕದ ಬೆಂಗಳೂರು ನಗರ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

ಧಾರವಾಡ | ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಎಸ್.ಎಫ್. ಸಿದ್ದನಗೌಡರ

"ಇಂದಿನ ಒತ್ತಡದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ...

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್...

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...