ಯುವತಿ ಕೊಲೆ ಮಾಡಿ ಮೃತದೇಹವನ್ನು ಆಕೆಯ ಮನೆ ಮುಂದೆ ಇಟ್ಟ ಆರೋಪಿಯ ಬಂಧನ

Date:

ಯುವತಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಕೊಲೆ ಮಾಡಿ ಆಕೆಯ ಮೃತದೇಹವನ್ನು ಆರೋಪಿ ಅವರ ಮನೆ ಮುಂದೆ ಇಟ್ಟ ಘಟನೆ ಬೆಂಗಳೂರಿನ ಮಹದೇವಪುರಲ್ಲಿ ನಡೆದಿದೆ.

- Advertisement -

ಕಲಬುರಗಿ ಮಹಾನಂದ(21) ಕೊಲೆಯಾದ ಯುವತಿ. ಕೃಷ್ಣ ಚಂದ್​ ಸೇಟಿ ಕೊಲೆ ಮಾಡಿದ ಆರೋಪಿ. ಸದ್ಯ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಲಬುರಗಿ ಮೂಲದ ಮಹಾನಂದ ಹಾಗೂ ಆಕೆಯ ಅಕ್ಕ ಇಬ್ಬರೂ ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ನೆಲೆಸಿದ್ದರು. ಈ ಯುವತಿಯರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣಚಂದ್ ಸೇಟಿ ವಾಸವಿದ್ದನು. ಈತ ನಗರದ ಟೆಕ್‌ ಪಾರ್ಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದನು.

ಮಹಾನಂದ ಆ. 10 ಶೆಲ್ ಪೆಟ್ರೋಲ್‌ ಬಂಕ್‌ಗೆ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದಳು. ಈ ವೇಳೆ, ಮನೆಯಲ್ಲಿ ರಾತ್ರಿ ಅಡುಗೆ ಮಾಡಲು ಒಲೆಯ ಮೇಲೆ ಅನ್ನಕ್ಕೆ ಇಟ್ಟು, ಹೊರಗೆ ಬಂದಿದ್ದಳು.  

ಯುವತಿ ಹೊರಗಡೆ ಬಂದ ವೇಳೆ, ಆರೋಪಿ ಕೃಷ್ಣ ಚಂದ್​​ ಸಾಟಿ ಆಕೆಯನ್ನು ತನ್ನ ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿ, ಕಾಪಾಡುವಂತೆ ಕಿರುಚಾಡಿದ್ದಾಳೆ. ಆರೋಪಿ ಯುವತಿಯನ್ನು ಒಂದು ಕೈಯಿಂದ ಆಕೆಯ ಬಾಯಿ, ಮೂಗು ಮುಚ್ಚಿ ಇನ್ನೊಂದು ಕೈಯಿಂದ ಆಕೆಯ ಕತ್ತು ಹಿಸುಕಿದ್ದಾನೆ.

ಈ ವೇಳೆ, ಯುವತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಬಳಿಕ ಮೃತದೇಹವನ್ನು ಆರೋಪಿ ಬಟ್ಟೆಯಲ್ಲಿ ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದನು. ಬಳಿಕ ಬೆಳಗಿನ ಜಾವ 5:30 ರ ಸುಮಾರಿಗೆ ಶವವನ್ನು ಆಕೆಯ ಮನೆಯ ಮುಂದೆ ಇಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಮನೆ ಮುಂದೆ ಸೇರಿದ್ದಾರೆ. ಈ ವೇಳೆ, ಆರೋಪಿಯೂ ಕೂಡ ಜನರ ಮಧ್ಯೆ ಸೇರಿ ಏನು ತಿಳಿಯದಂತೆ ನಿಂತಿದ್ದಾನೆ.

ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...