2ನೇ ದಿನವೂ ಮುಂದುವರೆದ ಆಶಾ ಹೋರಾಟ; ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಮಲಗಿದ್ದ ಕಾರ್ಯಕರ್ತೆಯರು

Date:

ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಅವರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅವರ ಹೋರಾಟಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಹೋರಾಟ ಮುಂದುವರೆಸಿದ್ದಾರೆ. ಸಾವಿರಾರು ಆಶಾ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಫ್ರೀಡಂ ಪಾರ್ಕ್‌ನ ಆವರಣ ಮತ್ತು ರಸ್ತೆಗಳಲ್ಲಿಯೇ ಮಲಗಿದ್ದರು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಒದಗಿಸುವ ಆಶಾ ಕಾರ್ಯಕರ್ತೆಯರು ರಸ್ತೆಗಳಲ್ಲಿ ಮಲಗಿದ್ದ ಆ ದೃಶ್ಯಗಳು ಮನಕಲಕುವಂತಿದ್ದವು. ಆದರೆ, ಸರ್ಕಾರ ಹೃದಯ ಇನ್ನೂ ಕರಗಿಲ್ಲ.

- Advertisement -

ಆಶಾ ಕಾರ್ಯಕರ್ತೆಯರ ಹೋರಾಟ ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರುವವರೆಗೂ ವಾಪಸ್‌ ಹೋಗುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಆಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ. ರಾತ್ರಿಯ ಚಳಿ-ಬೆಳಗಿನ ಬಿಸಿಲಿನ ನಡುವೆಯೂ ಆಶಾ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲೇ ಹೋರಾಟ ನಡೆಸುತ್ತಿದ್ದಾರೆ. ರಾತ್ರಿ ಕೊರೆವ ಚಳಿಯಲ್ಲಿಯೂ ಬಯಲು ಹಾಗೂ ರಸ್ತೆಯಲ್ಲಿ ಆಶಾಗಳು ಮಲಗಿರುವ ದೃಶ್ಯಗಳು ಫ್ರೀಡಂ ಪಾರ್ಕ್‌ನ ಸುತ್ತ ಕಂಡುಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ಬುಧವಾರ, ಧರಣಿ ಸ್ಥಳಕ್ಕೆ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ತ್ರಿವೇಣಿ ಮತ್ತು ಆಶಾ ಕಾರ್ಯಕ್ರಮದ ಉಪ ನಿರ್ದೇಶಕರಾದ ಡಾ. ಪ್ರಭುಗೌಡ ಪಾಟೀಲ್ ಅವರು ಭೇಟಿ ನೀಡಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ, ಈಗಾಗಲೇ ಹಲವಾರು ಬಾರಿ ಇಂತಹ ಭರವಸೆಗಳನ್ನು ನೀಡಿ, ಸರ್ಕಾರ ಮೋಸ ಮಾಡಿದೆ. ಈ ಬಾರಿ ಮತ್ತೆ ಮೋಸಹೋಗುವ ಮಾತೇ ಇಲ್ಲ. ಭರವಸೆ ಈಡೇರಿದ ನಂತರವೇ ಧರಣಿಯನ್ನು ನಿಲ್ಲಿಸುತ್ತೇವೆಂದು ಹೋರಾಟಗಾರರು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ನಾವು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಹೋರಾಟ ಇವತ್ತು-ನಿನ್ನೆಯದಲ್ಲ. ಕಳೆದ 15 ವರ್ಷದಿಂದ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಕೆಲಸ ಆರಂಭಿಸಿದ ಆರು ತಿಂಗಳಲ್ಲಿಯೇ ಸಮಸ್ಯೆಗಳ ಬಗ್ಗೆ ಮೊದಲ ಹೋರಾಟ ನಡೆದಿತ್ತು. ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನೇಮಿಸಿಕೊಂಡಿತ್ತಾದರೂ, ಅವರ ಬಗ್ಗೆ ಕೇಳುವವರು ಯಾರೂ ಇರಲಿಲ್ಲ. ಕೆಲಸ ಶುರು ಮಾಡಿದಾಗಿನಿಂದ ಈವರೆಗೆ ಹೋರಾಟದ ಮೂಲಕವೇ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಸೌಲಭ್ಯಗಳನ್ನು ಪಡೆದಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ‘ಡ್ರೇಸ್ ಕೋಡ್’ ಬೇಕು ಎಂಬ ಹೋರಾಟದ ಮೂಲಕವೇ ಈ ‘ಪಿಂಕ್‌’ ಬಣ್ಣದ ಸೀರೆಯನ್ನು ಪಡೆದಿದ್ದೇವೆ. ಎಲ್ಲದಕ್ಕೂ ಹೋರಾಟ ಮಾಡಬೇಕಾದ ಅನಿವಾರ್ಹತೆ ಇದೆ. ಗೌರವಧನ ಹೆಚ್ಚಿಸುವವರೆಗೂ ನಾವು ನಮ್ಮೂರುಗಳಿಗೆ ಮರುಳುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟುಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...